-ಪರಿಶೀಲನಾ ಸಭೆಯಲ್ಲಿಡಾ.ಪುಷ್ಪ ಅಮರನಾಥ್ ಅಧಿಕಾರಿಗಳಿಗೆ ಸೂಚನೆ
ವಿಕ ಸುದ್ದಿಲೋಕ ಚಾಮರಾಜನಗರ
ರಾಜ್ಯ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿದ್ದು, ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ತಿಳಿಸಿದರು.
ನಗರದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘‘ರಾಜ್ಯ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿರುವ ಬಗ್ಗೆ ಪರಿಶೀಲಿಸಲು ಜಿಲ್ಲೆಯ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷರು ಮುಂದಾಗಬೇಕಿದೆ. ಹೀಗಾಗಿ ಪ್ರತಿ ತಾಲೂಕಿಗೂ ಉಪಾಧ್ಯಕ್ಷರಿಗೆ ಜವಾಬ್ದಾರಿ ನೀಡಿ ಪೂರ್ಣ ಪ್ರಮಾಣದಲ್ಲಿಪರಿಶೀಲಿಸಬೇಕು. ಅರ್ಹ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು,’’ ಎಂದರು.
‘‘ಗ್ರಾಮ ಪಂಚಾಯಿತಿ ಮಟ್ಟದಲ್ಲಿನಡೆಯುವ ಗ್ರಾಮ ಸಭೆಗಳಲ್ಲಿಗ್ಯಾರಂಟಿ ಯೋಜನೆಗಳ ಬಗ್ಗೆ ಪರಿಶೀಲಿಸಬೇಕು. ಎಷ್ಟು ಜನರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ಸಿಗುತ್ತಿದೆ ಎಂಬುದನ್ನು ತಿಳಿದುಕೊಳ್ಳಬೇಕು. ಜತೆಗೆ ಸಮಸ್ಯೆಗಳು ಕಂಡು ಬಂದ ಬಗ್ಗೆ ಕೂಡಲೇ ಪರಿಹಾರ ಒದಗಿಸಲು ಕ್ರಮಕೈಗೊಳ್ಳಬೇಕು,’’ ಎಂದು ಸೂಚನೆ ನೀಡಿದರು.
ಗೃಹಲಕ್ಷ್ಮಿ ಯೋಜನೆ ಪಡೆಯುತ್ತಿರುವ ಕುಟುಂಬದ ಮುಖ್ಯಸ್ಥರು ಮರಣ ಹೊಂದಿದ್ದಲ್ಲಿಯೋಜನೆ ಪಡೆಯಬೇಕಿರುವ ಕುಟುಂಬದ ಮುಂದಿನ ಮುಖ್ಯಸ್ಥ ಫಲಾನುಭವಿಯ ಪ್ರಸ್ತಾವನೆಯನ್ನು ಸಲ್ಲಿಸಿ ಆ ಕುಟುಂಬಕ್ಕೆ ಗೃಹಲಕ್ಷ್ಮಿ ಯೋಜನೆ ಸೌಲಭ್ಯ ತ್ವರಿತವಾಗಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಸರಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗುವ ನಿಟ್ಟಿನಲ್ಲಿನಿರಂತರವಾಗಿ ಗಮನಿಸಬೇಕು,’’ ಎಂದು ತಿಳಿಸಿದರು.
ಜಿಲ್ಲಾಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್ .ವಿ.ಚಂದ್ರು, ಜಿ.ಪಂ.ಕಾರ ್ಯದರ್ಶಿ ಶೃತಿ, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಸಹಾಯಕ ಯೋಜನಾಧಿಕಾರಿ ಶ್ರೀಕಂಠರಾಜು ಅರಸ್ , ಚೆಸ್ಕಾಂ ಇಇ ಪ್ರದೀಪ್ ಕುಮಾರ್ , ಜಿಲ್ಲಾಉದ್ಯೋಗಾಧಿಕಾರಿ ಮಹಮ್ಮದ್ ಅಕ್ಬರ್ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಎಚ್ .ಆರ್ .ಸುರೇಶ್ , ಕೆಎಸ್ ಆರ್ ಟಿಸಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಸಿಎಚ್ ಎನ್ 29ಎಸ್ ಎಂಆರ್ 3
ಚಾಮರಾಜನಗರದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಮಾತನಾಡಿದರು.

