ಬೇಸಿಗೆಯಲ್ಲಿಆರೋಗ್ಯ ರಕ್ಷಣೆಗೆ ಜಾಗೃತಿ ಮೂಡಿಸಿ
ವಿಕ ಸುದ್ದಿಲೋಕ ಮುಳಬಾಗಲು
ಬೇಸಿಗೆಯಲ್ಲಿಉತ್ತಮ ಆರೋಗ್ಯಕ್ಕೆ ಸಾರ್ವಜನಿಕರಲ್ಲಿಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಆರೋಗ್ಯ ಸುರಕ್ಷಣಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಕಡ್ಡಾಯವಾಗಿ ಮಾಡಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸುಗುಣ ತಿಳಿಸಿದರು.
ನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮುಂಭಾಗ ಬೇಸಿಗೆ ಕಾಲದಲ್ಲಿತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಕ್ರಮಗಳ ಕುರಿತು ಆರೋಗ್ಯ ಸುರಕ್ಷಣಾಧಿಕಾರಿಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿಮಾತನಾಡಿದ ಅವರು, ಹೀಟ್ ಸ್ಟೊ್ರೕಕ್ , ಅತಿಸಾರ ಮತ್ತು ನಿರ್ಜಲೀಕರಣದ ಪ್ರಕರಣಗಳನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದೆಂದು ತಿಳಿಸಿದರು.
ಇತ್ತೀಚೆಗೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸುವುದು ಅಗತ್ಯವಾಗಿದೆ. ಮನೆಯಲ್ಲೇ ತಯಾರಿಸಿದ ನಿಂಬೆಹಣ್ಣಿನ ಶರಬತ್ತು, ಮಜ್ಜಿಗೆ, ಎಳೆನೀರು ಮತ್ತು ಹಣ್ಣಿನ ರಸವನ್ನು ಸೇವಿಸಬೇಕು. ಹಗುರವಾದ ತಿಳಿ ಬಣ್ಣದ ಸಡಿಲವಾದ ಹತ್ತಿ ಬಟ್ಟೆಯನ್ನು ಧರಿಸಬೇಕು. ಮನೆಯಿಂದ ಹೊರಗಡೆ ಹೋಗುವಾಗ ಕೊಡೆ, ಟೋಪಿ ಅಥವಾ ಕನ್ನಡಕ ಬಳಸಬೇಕೆಂದು ತಿಳಿಸಿದರು.
ಹೆಚ್ಚು ನೀರಿನ ಅಂಶವಿರುವ ಹಣ್ಣುಗಳಾದ ಕಲ್ಲಂಗಡಿ, ಕಿತ್ತಳೆ, ಸೌತೆಕಾಯಿ ಬಳಸಬೇಕು. ಅವಶ್ಯವಿದ್ದರೆ ಮಾತ್ರ ಮನೆಯಿಂದ ಹೊರಗಡೆ ಹೋಗಬೇಕು. ಮಧ್ಯಾಹ್ನ 12 ರಿಂದ 3 ಗಂಟೆಯ ವರೆಗೆ ಬಿಸಿಲಿನಲ್ಲಿಓಡಾಡುವುದನ್ನು ನಿಲ್ಲಿಸಬೇಕು ಮತ್ತು ಶ್ರಮದಾಯಕ ಕೆಲಸ ಮಾಡುವುದನ್ನು ತಪ್ಪಿಸಬೇಕು. ದೇಹವನ್ನು ನಿರ್ಜಲಿಕರಣಗೊಳಿಸುವ ಅಲ್ಕೋಹಾಲ್ , ಕಾಫಿ, ಚಹಾ ಸೇವಿಸಬಾರದು ಎಂದು ತಿಳಿಸಿದರು.
ಇದೇ ವೇಳೆ ಆಶಾ ಕಾರ್ಯಕರ್ತೆಯರಿಗೆ ಹೆಡ್ ಕ್ಯಾಪ್ ಹಾಗೂ ಓಆರ್ ಎಸ್ ಪ್ಯಾಕೆಟ್ ಗಳನ್ನು ವಿತರಿಸಲಾಯಿತು. ಹಿರಿಯ ಪ್ರಾರ್ಥಮಿಕ ಸುರಕ್ಷಣಾಧಿಕಾರಿ ಟಿ.ವಿ. ಗೋಪಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಲಕ್ಷಿತ್ರ್ಮದೇವಮ್ಮ, ಆಶಾ ಮೇಲ್ವಿಚಾರಕಿ ಮಂಜುಳ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಂ. ಚಿದಾನಂದ, ವಂಶಿ ಕೃಷ್ಣ ಇದ್ದರು.
27 ಎಂ.ಬಿ.ಎಲ್ ಪೋಟೋ 8 ಮುಳಬಾಗಲು ನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮುಂಭಾಗ ಬೇಸಿಗೆ ಕಾಲದಲ್ಲಿತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

