ಕೆಎಸ್ ಡಿಎಲ್ 2,016 ಕೋಟಿ ರೂ. ವಹಿವಾಟಿನ ವಿಕ್ರಮ

Contributed byGirish J.R|Vijaya Karnataka

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು 2025-26ನೇ ಹಣಕಾಸು ವರ್ಷದಲ್ಲಿ 2,016 ಕೋಟಿ ರೂ. ವಹಿವಾಟು ಮತ್ತು 507 ಕೋಟಿ ರೂ. ಲಾಭ ಗಳಿಸಿದೆ. ಇದು 110 ವರ್ಷಗಳಲ್ಲೇ ಅತಿದೊಡ್ಡ ಸಾಧನೆಯಾಗಿದೆ. ಸಂಸ್ಥೆಯು 105 ವರ್ಷಗಳಲ್ಲಿ ಮೊದಲ ಸಾವಿರ ಕೋಟಿ ರೂ. ತಲುಪಿತ್ತು, ಆದರೆ ಈಗ ಕೇವಲ ನಾಲ್ಕು ವರ್ಷಗಳಲ್ಲಿ 2 ಸಾವಿರ ಕೋಟಿ ರೂ. ತಲುಪಿದೆ. ಆಧುನಿಕ ವ್ಯಾಪಾರ ಮತ್ತು ಇ-ಕಾಮರ್ಸ್ ಮೂಲಕ 420 ಕೋಟಿ ರೂ. ಮತ್ತು 120 ಕೋಟಿ ರೂ. ವಹಿವಾಟು ದಾಖಲಾಗಿದೆ.

ksdl records 2016 crore rupees in revenue

- 110 ವರ್ಷಗಳಲ್ಲಿಮಹಾ ದಾಖಲೆ | 507 ಕೋಟಿ ರೂ. ಲಾಭ ಕಂಡ ಸರಕಾರಿ ಉದ್ಯಮ

ವಿಕ ಸುದ್ದಿಲೋಕ ಬೆಂಗಳೂರು

ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆಎಸ್ ಡಿಎಲ…) 2025-26ನೇ ಹಣಕಾಸು ವರ್ಷದಲ್ಲಿಇದೇ ಮೊದಲ ಬಾರಿಗೆ 2,016 ಕೋಟಿ ರೂ. ವಹಿವಾಟು ನಡೆಸಿದ್ದು, 507 ಕೋಟಿ ರೂ. ಲಾಭ ಗಳಿಸಿದೆ. ಇದು ಸಾರ್ವಜನಿಕ ಉದ್ದಿಮೆಗಳ ಸಾಧನೆಯಲ್ಲಿಕಿರೀಟಪ್ರಾಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದಲ್ಲಿಮಂಗಳವಾರ ಏರ್ಪಡಿಸಿದ್ದ ಮೈಸೂರು ಸ್ಯಾಂಡಲ್ ನ ಸಾಧನೆಯ ಶಿಖರ ಕಾರ್ಯಕ್ರಮದಲ್ಲಿಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿ, ‘‘ಸಂಸ್ಥೆಯು ಮೊದಲ ಒಂದು ಸಾವಿರ ಕೋಟಿ ರೂ. ವಹಿವಾಟು ತಲುಪಲು 105 ವರ್ಷ ತೆಗೆದುಕೊಂಡಿತ್ತು. ಆದರೆ, ಅಲ್ಲಿಂದ 2 ಸಾವಿರ ಕೋಟಿ ರೂ. ಮಟ್ಟವನ್ನು ಕೇವಲ ನಾಲ್ಕು ವರ್ಷಗಳಲ್ಲಿತಲುಪಿದೆ. 2022-23ರಲ್ಲಿ1,375 ಕೋಟಿ ರೂ. ವಹಿವಾಟು ನಡೆಸಿದ್ದ ಸಂಸ್ಥೆಯು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕಳೆದ ಮೂರು ವರ್ಷಗಳಲ್ಲಿ2,016 ಕೋಟಿ ರೂ. ತಲುಪಿದೆ. ಅಲ್ಪಾವಧಿಯಲ್ಲಿವಹಿವಾಟು 641 ಕೋಟಿ ರೂ. ಹೆಚ್ಚಳ ಕಂಡಿದೆ,’’ ಎಂದರು.

‘‘ಮೊದಲು ಸಂಸ್ಥೆಯು 34 ಉತ್ಪನ್ನಗಳನ್ನು ಹೊಂದಿತ್ತು. ಮೂರು ವರ್ಷಗಳಲ್ಲಿನಾವು 57 ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದೇವೆ. ಈಗ ಒಟ್ಟು 94 ಉತ್ಪನ್ನಗಳಿವೆ. ಹೊಸ ನೇಮಕಾತಿ, ಯಂತ್ರೋಪಕರಣಗಳ ಖರೀದಿ ಇಲ್ಲದೆ ಇದನ್ನೆಲ್ಲಸಾಧಿಸಲಾಗಿದೆ. ಸಂಸ್ಥೆಯ ಉತ್ಪಾದನಾ ಸಾಮರ್ಥ್ಯ 26 ಸಾವಿರ ಮೆಟ್ರಿಕ್ ಟನ್ ಇದ್ದರೂ ಪರಿಣಾಮಕಾರಿ ಕಾರ್ಯವಿಧಾನದ ಮೂಲಕ 2025-26ರಲ್ಲಿ47 ಸಾವಿರ ಮೆಟ್ರಿಕ್ ಟನ್ ಉತ್ಪಾದಿಸಲಾಗಿದೆ. 507 ಕೋಟಿ ರೂ. ಲಾಭದಲ್ಲಿಸರಕಾರಕ್ಕೆ 157 ಕೋಟಿ ರೂ. ಲಾಭಾಂಶ (ಡಿವಿಡೆಂಡ್ ) ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಹಸ್ತಾಂತರಿಸಲಾಗುವುದು,’’ ಎಂದು ವಿವರಿಸಿದರು.

‘‘ನಮ್ಮ ಸರಧಿಕಾಧಿರ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಆಧುನಿಕ ವ್ಯಾಪಾರ ಮತ್ತು ಇ-ಕಾಮರ್ಸ್ ವಹಿವಾಟು ಇರಲಿಲ್ಲ. ನಂತರ ಈ ನಿಟ್ಟಿನಲ್ಲಿಪ್ರಯತ್ನ ಮಾಡಿದ್ದಕ್ಕೆ 2025-26ನೇ ಸಾಲಿನಲ್ಲಿಆಧುನಿಕ ವ್ಯಾಪಾರ ವಹಿವಾಟಿನಲ್ಲಿ420 ಕೋಟಿ ರೂ. ಮತ್ತು ಇ-ಕಾಮರ್ಸ್ ವಿಧಾನದಲ್ಲಿ120 ಕೋಟಿ ರೂ. ದಾಖಲಿಸಿದೆ. ಒಟ್ಟಾರೆ ಸಂಸ್ಥೆಯ ವಹಿವಾಟನ್ನು 2028ರ ಹೊತ್ತಿಗೆ 3 ಸಾವಿರ ಕೋಟಿ ರೂ. ಮತ್ತು 2030ರ ಹೊತ್ತಿಗೆ 5 ಸಾವಿರ ಕೋಟಿ ರೂ.ಗಳಿಗೆ ಕೊಂಡೊಯ್ಯುವ ಗುರಿ ಇದೆ. ಇದಕ್ಕೆ ಪೂರಕವಾಗಿ ವಿಜಯಪುರದಲ್ಲಿ50 ಎಕರೆಯಲ್ಲಿನೂತನ ಉತ್ಪಾದನಾ ಘಟಕ ಆರಂಭವಾಗಲಿದ್ದು, ಇದಕ್ಕೆ 229 ಕೋಟಿ ರೂ. ಮಂಜೂರು ಮಾಡಲಾಗಿದೆ,’’ ಎಂದು ತಿಳಿಸಿದರು.

ರೈತರಿಗೆ ಉತ್ತೇಜನ:

‘‘ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಗಂಧದ ಎಣ್ಣೆಯೇ ಮೂಲವಸ್ತುವಾಗಿದೆ. ಇದರ ಸುಗಮ ಪೂರೈಕೆಗೆ ಸಂಸ್ಥೆಯು ರೈತರೊಂದಿಗೆ ಕೈಜೋಡಿಸಿ ‘ಗ್ರೋ ಮೋಧಿರ್ ಸ್ಯಾಂಡಲ…’ ಕಾರ್ಯಕ್ರಮ ರೂಪಿಸಿದೆ. ಇದರಧಿಡಿ 10 ವರ್ಷಗಳಲ್ಲಿ10 ಸಾವಿರ ಎಕರೆ ಗಂಧದ ನೆಡುತೋಪು ಬೆಳೆಸಲಾಗುವುದು. ಇದಕ್ಕಾಗಿ ರೈತರಿಗೆ ಪ್ರತಿ ಗಂಧದ ಗಿಡಕ್ಕೆ 3 ವರ್ಷಗಳಿಗೆ 500 ರೂ. ಪ್ರೋತ್ಸಾಹಧನ ನೀಡಲಾಗುವುದು. ಜತೆಗೆ ಬೆಂಗಳೂರಿನ ಜಿಕೆವಿಕೆ ಮತ್ತು ವಿಜಯಪುರದ ಕೃಷಿ ವಿದ್ಯಾಲಯಗಳ ಸಹಯೋಗದಲ್ಲಿಶ್ರೀಗಂಧದ ಅಧ್ಯಯನ ಪೀಠ ತೆರೆಯಲಾಗುವುದು,’’ ಎಂದು ಸಧಿಚಿವ ಪಾಧಿಟೀಲ್ ಮಾಹಿತಿ ನೀಡಿದರು.

‘‘ಆಸ್ಪ್ರೇಲಿಯಾ ಸೇರಿದಂತೆ ದೇಶ ವಿದೇಶಕ್ಕೆ ಹೋಗಿ ಸಾಬೂನು ಮಾರಾಟ ವಿಸ್ತರಣೆಗೆ ಪ್ರಯತ್ನ ಮಾಡಿದ್ದೇವೆ. ಆಧುನಿಕ ಮಾರಾಟ ವ್ಯವಸ್ಥೆ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟಿದ್ದು ಇವತ್ತಿನ ಸಾಧನೆಗೆ ಕಾರಣವಾಯಿತು. ಮುಂದಿನ ದಿನಗಳಲ್ಲಿಯುನೈಟೆಡ್ ಎಮಿರೇಟ್ಸ್ ದೇಶಗಳಲ್ಲಿಯೂ ಮಾರುಕಟ್ಟೆ ವಿಸ್ತರಿಧಿಸಲು ಯೋಜನೆ ರೂಪಿಸುತ್ತಿದ್ದೇವೆ. ಸೋಪು ಮಾತ್ರವಲ್ಲದೆ, ಕಾಸ್ಮೆಟಿಕ್ , ಸುಗಂಧ ದ್ರವ್ಯ ವಿಭಾಗದಲ್ಲೂಉತ್ಪನ್ನಗಳನ್ನು ಮಾರುಕಟ್ಟೆ ವಿಸ್ತರಿಸುತ್ತೇವೆ,’’ ಎಂದು ಸಂಸ್ಥೆ ಅಧ್ಯಕ್ಷ ಸಿ.ಎಸ್ .ಅಪ್ಪಾಜಿ ನಾಡಗೌಡ ಹೇಳಿದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿಕೆಎಂ ಪ್ರಶಾಂತ್ ಮಾತನಾಡಿ, ‘‘ಸಂಸ್ಥೆಯ ನೌಕರರಿಗೆ 4.83 ಕೋಟಿ ರೂ.ಗಧಿಳನ್ನು ವೇತನ ಒಪ್ಪಂದದ ಮೂಲಕ ನೀಡಲಾಗಿದೆ. 20 ಕೋಟಿ ರೂ. ಕ್ಯಾಂಪಸ್ ಸಂರಕ್ಷಣೆಗೆ ವಿನಿಯೋಗಿಸಲಾಗಿದೆ,’’ ಎಂದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ , ಸಂಸ್ಥೆಯ ಸಿಬ್ಬಂದಿ ಪಾಲ್ಗೊಂಡರು.

ಫೋಧಿಟೊ: ಮೈಸೂರು ಸ್ಯಾಂಡಲ್ ನ ಸಾಧನೆಯ ಶಿಖರ ಕಾರ್ಯಕ್ರಮದಲ್ಲಿಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸನ್ಮಾನಿಸಧಿಲಾಧಿಯಿತು. ಸಚಿವ ಎಂ.ಬಿ.ಪಾಟೀಲ, ಸಂಸ್ಥೆ ಅಧ್ಯಕ್ಷ ಸಿ.ಎಸ್ .ಅಪ್ಪಾಜಿ ನಾಡಗೌಡ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ಪಿಕೆಎಂ ಪ್ರಶಾಂತ್ ಇದ್ದರು.