ಸುಳ್ಯ ತಾಲೂಕಿನಲ್ಲಿಅಡಕೆ ಹಳದಿ ರೋಗ, ಎಲೆ ಚುಕ್ಕಿ ರೋಗಗಳಿಂದ ಅಡಕೆ ಕೃಷಿಕರು ಸಂಕಷ್ಟದಲ್ಲಿದ್ದಾರೆ. ಇದರ ನಡುವೆ ಕಾಡು ಪ್ರಾಣಿಗಳ ನಿರಂತರ ಹಾವಳಿಯಿಂದ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ರೈತರು ಬೆಳೆದ ಕೃಷಿಗಳ ಶಾಶ್ವತ ರಕ್ಷಣೆ ಆಗಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಕರ್ನಾಟಕ ಅರಣ್ಯ ಇಲಾಖೆ ಸುಬ್ರಹ್ಮಣ್ಯ ಉಪವಿಭಾಗ ಹಾಗೂ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸಹಯೋಗದಲ್ಲಿಕಾಲೇಜಿನ ಸಭಾಂಗಣದಲ್ಲಿಬುಧವಾರ ನಡೆದ ವಿಶ್ವ ಆನೆ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಶ್ವ ಆನೆ ದಿನಾಚರಣೆ ಕುರಿತು ಡಾ.ಅವಿನಾಶ್ ಉಪನ್ಯಾಸ ಮಾಡಿದರು. ಜಿಲ್ಲಾಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ , ಸುಡಾ ಅಧ್ಯಕ್ಷ ಕೆ.ಎಂ ಮುಸ್ತಫ , ಸುಬ್ರಹ್ಮಣ್ಯ ಉಪವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಪೈ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಪ್ರಿನ್ಸಿಪಾಲ್ ಡಾ.ಲೀಲಾಧರ ಡಿ.ವಿ. ಉಪಸ್ಥಿತರಿದ್ದರು.
ನಾನಾ ಸಂದರ್ಭಗಳಲ್ಲಿಅರಣ್ಯ ಇಲಾಖೆಗೆ ಸಹಕರಿಸಿದ ಕೃಷಿಕರಾದ ಪಿ.ವಿ. ಪ್ರಭಾಕರ ರೈ, ಕೆ.ಪಿ. ಜಗದೀಶ್ , ಪಶು ಸಂಗೋಪನೆ ಇಲಾಖೆ ವೈದ್ಯಾಧಿಕಾರಿ ಡಾ.ನಿತಿನ್ ಪ್ರಭು, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಸಂದೀಪ್ , ಚಂದ್ರಪ್ಪ, ಪ್ರಕಾಶ್ , ಇಲಾಖೆಯ ಜೀಪು ಚಾಲಕ ಪುರುಷೋತ್ತಮ ಅವರನ್ನು ಸನ್ಮಾನಿಸಲಾಯಿತು.
ವಲಯ ಅರಣ್ಯಾಧಿಕಾರಿಗಳಾದ ನಿರಂಜನ್ ಶೆಟ್ಟಿ , ಕಿರಣ್ ಬಿ. ಎಂ., ಸಂಧ್ಯಾ ಹಾಗೂ ವಿದ್ಯಾರ್ಥಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಅರಣ್ಯ ಇಲಾಖೆ ವತಿಯಿಂದ ಸುಳ್ಯ, ಪಂಜ ಮತ್ತು ಸುಬ್ರಹ್ಮಣ್ಯ ವಲಯಗಳ ವತಿಯಿಂದ ನಡೆದ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥ್ ಎನ್ . ಸ್ವಾಗತಿಸಿದರು. ನೂತನ ಆರ್ ಎಫ್ ಒ ನಿರಂಜನ್ ಶೆಟ್ಟಿ ವಂದಿಸಿದರು. ಧನ್ಯ ಡಿ. ಕಾರ್ಯಕ್ರಮ ನಿರೂಪಿಸಿದರು.
ಫೋಟೋ
12ಎಸ್ ಯುಎಲ್ -ಅರಣ್ಯ ಇಲಾಖೆ ವತಿಯಿಂದ ವಿಶ್ವ ಆನೆ ದಿನಾಚರಣೆ ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.