Launch Of Har Ghar Tiranga Campaign By Dc For 80th Independence Day
ಹರ್ ಘರ್ ತಿರಂಗಾಗೆ ಡಿಸಿ ಚಾಲನೆ
Contributed by: BASAVARAJU KG|Vijaya Karnataka•
ಹರ್ ಘರ್ ತಿರಂಗಾಗೆ ಡಿಸಿ ಚಾಲನೆ
ದಾವಣಗೆರೆ: ಜಿಲ್ಲಾಡಳಿತ ಭವನದ ಆವರಣದಲ್ಲಿಶುಕ್ರವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈ ಭಾರತ್ ಕೇಂದ್ರದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಚಾಲನೆ ನೀಡಿದರು.ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿಆ.15ರಂದು ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ತಮ್ಮ ಮನೆ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಕಟ್ಟುವಂತೆ ಈ ವೇಳೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಈ ವೇಳೆ ಹಾಜರಿದ್ದ ಸರಕಕಾರಿ ಅಧಿಕಾರಿ, ಸಿಬ್ಬಂದಿ ಸಾಮೂಹಿಕವಾಗಿ ರಾಷ್ಟ್ರಗೀತೆ, ವಂದೇ ಮಾತರಂ ಗೀತೆ ಹಾಡಿದರು.
ಈ ವೇಳೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲ ರಾವ್ , ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ , ಜಿ.ಪಂ ಯೋಜನಾ ನಿರ್ದೇಶಕ ಮಲ್ಲನಾಯ್ಕ, ಜಿಲ್ಲಾಆರೋಗ್ಯಾಧಿಕಾರಿ ಡಾ.ಕೆ.ಎಸ್ .ಮಧು, ಜಿಲ್ಲಾಸರ್ಜನ್ ಡಾ.ನಾಗೇಂದ್ರಪ್ಪ, ಜಿ.ಪಂ.ಉಪಕಾರ್ಯದರ್ಶಿ ಮಮತಾ ಹೊಸಗೌಡರ್ , ಜಿಪಂ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.
--
14ಡಿವಿಜಿ05 (ವಿವೇಕ್ )
ದಾವಣಗೆರೆ ಜಿಲ್ಲಾಡಳಿತ ಭವನದ ಆವರಣದಲ್ಲಿಶುಕ್ರವಾರ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಚಾಲನೆ ನೀಡಿದರು.