ವಿಕ ಸುದ್ದಿಲೋಕ ನೆಲ್ಯಾಡಿಮಹಾತ್ಮಗಾಂಧಿ ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಭಾರತಿ ಧ್ವಜಾರೋಹಣ ನೆರವೇರಿಸಿದರು.
ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್ , ಸದಸ್ಯ ಮೊಹಮ್ಮದ್ ಇಕ್ಬಾಲ್ , ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿ, ರಾಷ್ಟ್ರದ ಏಕತೆ, ಪ್ರಗತಿ ಹಾಗೂ ಸೌಹಾರ್ದವನ್ನು ಕಾಪಾಡುವ ಸಂಕಲ್ಪದೊಂದಿಗೆ ಕಾರ್ಯಕ್ರಮ ನಡೆಯಿತು.
ಪಂಚಾಯಿತಿ ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಪರಸ್ಪರ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಫೋಟೋ :15ಕೆಎನ್ ಭಾರತಿ
(ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಭಾರತಿ ಧ್ವಜಾರೋಹಣ ನೆರವೇರಿಸಿದರು.)