ಬೆಂಗಳೂರು: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿಮಳೆ ಕೊರತೆಯಿಂದಾಗಿ ಬಿತ್ತನೆ ವಿಳಂಬಧಿವಾಗಿದ್ದು, ರೈತರಿಗೆ ಅನುಕೂಲಧಿವಾಗುಧಿವಂತೆ ‘ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ’ ಯೋಜನೆಯಡಿ ಬೆಳೆ ವಿಮೆ ನೋಂದಣಿ ದಿನಾಂಕವನ್ನು ಆ. 31ರವರೆಗೆ ವಿಸ್ತರಿಸುವಂತೆ ವಿಧಾನ ಪರಿಷತ್ ಸದಸ್ಯ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಕೃಷಿ ಸಚಿವ ಪಿ.ಎಂ.ಧಿನರೇಂದ್ರಧಿಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಮನವಿಗೆ ಸ್ಪಂದಿಸಿರುವ ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ವಿಮಾ ನೋಂದಣಿ ಗಡುವನ್ನು ವಿಸ್ತರಿಸುವಂತೆ ಕೇಂದ್ರ ಸರಕಾರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸಲು ಕೃಷಿ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ‘‘ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ವಾಡಿಕೆಯಂತೆ ಮಳೆಯಾಗದ ಪರಿಣಾಮ ಆ.2ನೇ ವಾರ ಕಳೆದರೂ ಪೂರ್ಣ ಪ್ರಮಾಣದಲ್ಲಿಬಿತ್ತನೆ ಆರಂಭವಾಗಿಲ್ಲ. ವಿಮೆ ನೋಂದಣಿಗೆ ಆ.14 ಕೊನೆಯ ದಿನವಾಗಿದೆ. ಆದರೆ, ತಿಂಗಳಾಂತ್ಯದ ವರೆಗೂ ಮಧ್ಯಮಾವಧಿ ಹಾಗೂ ಅಲ್ಪಾವಧಿ ತಳಿಗಳ ಬಿತ್ತನೆಗೆ ಅವಕಾಶವಿರುವುದರಿಂದ ಗಡುವು ವಿಸ್ತರಿಸಬೇಕು,’’ ಎಂದು ದಿನೇಶ್ ಗೂಳಿಗೌಡ ಒತ್ತಾಯಿಸಿದ್ದರು.