ವಿವೇಕಾನಂದರ ವಿಚಾರಧಾರೆ ಮೈಗೂಡಿಸಿಕೊಳ್ಳಿ

Contributed byprk.k73@gmail.com|Vijaya Karnataka
inspiring youth to adopt vivekanandas philosophy
ವಿವೇಕಾನಂದರ ವಿಚಾರಧಾರೆ ಮೈಗೂಡಿಸಿಕೊಳ್ಳಿ

ಅಂತಾರಾಷ್ಟ್ರೀಯ ಯುವ ದಿನಾಚರಣೆ ಕಾರ ್ಯಕ್ರಮದಲ್ಲಿನ್ಯಾ.ಗೌಡ ಜಗದೀಶ್ ರುದ್ರೆ ಸಲಹೆ
ವಿಕ ಸುದ್ದಿಲೋಕ ಮುಳಬಾಗಲು

ಯುವಕರು ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಸದೃಢ ಮತ್ತು ಸ್ವಾಭಿಮಾನಿ ಭಾರತವನ್ನು ನಿರ್ಮಿಸಬೇಕಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಗೌಡ ಜಗದೀಶ್ ರುದ್ರೆ ತಿಳಿಸಿದರು.

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿತಾಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲೂಕು ವಕೀಲರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿಏರ್ಪಡಿಸಿದ್ದ ಅಂತಾರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯುವ ಜನತೆ ಕೇವಲ ಆಧುನಿಕ ತಂತ್ರಜ್ಞಾನಕ್ಕೆ ಸೀಮಿತವಾಗದೇ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ತಿಳಿಸಿದರು.

ಯುವಕರು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿಗುರಿ ಇಟ್ಟಿಕೊಂಡು ಶ್ರದ್ದೆಯಿಂದ ವ್ಯಾಸಂಗ ಮಾಡಿ ಉನ್ನತ ಉದ್ಯೋಗಗಳನ್ನು ಅಲಂಕರಿಸಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಆರೋಗ್ಯ ಜೀವನ ನಡೆಸಬೇಕು. ಯುವಕರು ನಮ್ಮ ದೇಶದ ಬೆನ್ನೆಲೆಬು ಮಾತ್ರವಲ್ಲದೇಶದ ಭವಿಷ್ಯದ ನಿರ್ಮಾಪಕರಾಗಿದ್ದಾರೆ ಅವರು ಸಮಾಜದ ಒಳತಿಗಾಗಿ ಒಳ್ಳೆಯ ಕೆಲಸಗಳನ್ನು ಮಾಡಬೇಕಾಗಿದೆ ಎಂದು ತಿಳಿಸಿದರು.

ವಿವೇಕಾನಂದರು ಯುವಕರಲ್ಲಿಅಪಾರ ನಂಬಿಕೆ ಇಟ್ಟಿಕೊಂಡಿದ್ದರು. ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿರುವ ಯುವಕರು ಯಾವುದೇ ಗುರಿಯನ್ನು ಸಾಧಿಸಬಲ್ಲರು ಎಂಬ ಆಶಯ ಹೊಂದಿದ್ದರು ಎಂದು ತಿಳಿಸಿದರು.

ತಾಲೂಕು ವಕೀಲರ ಸಂಘದ ಅಧ್ಯಕ್ಷ ಪಿ.ಎಂ.ಸದಾಶಿವಯ್ಯ ಮಾತನಾಡಿ, ದೇಶದ ಅಭಿವೃದ್ಧಿಗೆ ಮತ್ತು ಉತ್ತಮ ಸಮಾಜ ನಿರ್ಮಾಣಕ್ಕೆ ಯುವಕರ ಪಾತ್ರ ಪ್ರಮುಖವಾಗಿದೆ. ಯುವಜನತೆಯಲ್ಲಿದೇಶ ಪ್ರೇಮ ಮತ್ತು ಸಮಾಜ ಸೇವೆಯ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಅವರ ಸಾಧನೆಯನ್ನು ಶ್ಲಾಘಿಘಿಸುವ ದಿನ ಇದಾಗಿದೆ ಎಂದು ತಿಳಿಸಿದರು.

ಹಿರಿಯ ವಕೀಲ ವಿ. ಜಯಪ್ಪ ಮಾತನಾಡಿ, ಯುವಕರು ಕಾನೂನಿನ ಬಗ್ಗೆ ಕನಿಷ್ಠ ಜ್ಞಾನವನ್ನು ಹೊಂದಿದ್ದರೆ ಹೆಚ್ಚು ಅನುಕೂಲವಾಗುತ್ತದೆ. ಇತ್ತೀಚಿನ ದಿನಗಳಲ್ಲಿಕಾನೂನಿನ ಬಗ್ಗೆ ಅರಿವಿಲ್ಲದ ಕಾರಣ ತುಂಬ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.

ಪ್ರಿನ್ಸಿಪಾಲ್ ಎಂ.ಕೃಷ್ಣಪ್ಪ, ವಕೀಲರ ಸಂಘದ ಉಪಾಧ್ಯಕ್ಷ ವೆಂಕಟೇಶ್ , ಕಾರ್ಯದರ್ಶಿ ರಮೇಶ್ , ವಕೀಲರಾದ ದಯಾನಂದ್ , ರಾಜ್ ವೇಲು ಇದ್ದರು.

12 ಎಂ.ಬಿ.ಎಲ್ ಪೋಟೋ 6 ಮುಳಬಾಗಲು ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಏರ್ಪಡಿಸಿದ್ದ ಅಂತಾರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಗೌಡ ಜಗದೀಶ್ ರುದ್ರೆ ಉದ್ಘಾಟಿಸಿದರು.