ರಾಘವೇಶ್ವರ ಶ್ರೀ

Contributed bygajunayakgokarna@gmail.com|Vijaya Karnataka
raghaveshwara shri the hunger of jatharagni and indian medical tradition
ಜಠರಾಗ್ನಿಯ ಅಭಿವ್ಯಕ್ತಿ ಹಸಿವು: ರಾಘವೇಶ್ವರ ಶ್ರೀ

ಅನ್ನಬ್ರಹ್ಮ ಚಾತುರ್ಮಾಸ್ಯದ ಧರ್ಮಸಭೆಯಲ್ಲಿಆಶೀರ್ವಚನ
ವಿಕ ಸುದ್ದಿಲೋಕ ಗೋಕರ್ಣ

ಯೋಗ ದೃಷ್ಟಿಗೂ ಆಧುನಿಕ ವೈದ್ಯ ಪದ್ಧತಿಗೂ ವ್ಯತ್ಯಾಸಗಳಿವೆ. ಭಾರತೀಯ ಪರಂಪರೆಯಲ್ಲಿಉಲ್ಲೇಖಿತ ಹಲವು ಅಂಶಗಳು ಯೋಗ ದೃಷ್ಟಿಗಷ್ಟೇ ಕಾಣುವಂತವಾಗಿವೆ. ಇಂದಿನ ವೈದ್ಯಕೀಯ ಉಪಕರಣಗಳಿಗೆ ಕಾಣಸಿಗುವುದಿಲ್ಲಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು.

ಇಲ್ಲಿನ ಅಶೋಕೆಯ ಮೂಲಮಠದ ಪರಿಸರದಲ್ಲಿನಡೆಯುತ್ತಿರುವ ಅನ್ನಬ್ರಹ್ಮ ಚಾತುರ್ಮಾಸ್ಯದ ಧರ್ಮಸಭೆಯಲ್ಲಿಆಶೀರ್ವಚನ ನೀಡಿದ ಶ್ರೀಗಳು, ‘‘ ‘‘ಜಠರಾಗ್ನಿಯ ಒಂದು ಪ್ರಮುಖ ಅಭಿವ್ಯಕ್ತಿ ಹಸಿವು. ಹಸಿವು ಕಾಣಿಸಿಕೊಳ್ಳುವುದು ದೇಹದಲ್ಲಿಜೀರ್ಣಕ್ರಿಯೆಗೆ ಸಂಬಂಧಿಸಿದ ಶಕ್ತಿ ಕಾರ್ಯನಿರ್ವಹಿಸುತ್ತಿರುವುದರ ಸೂಚನೆ. ದೇಹದ ಉಷ್ಣತೆ, ಹಸಿವು ಮತ್ತು ಆಹಾರ ಜೀರ್ಣವಾಗುವ ಪ್ರಕ್ರಿಯೆಯ ಹಿಂದೆ ಕಾರ್ಯನಿರ್ವಹಿಸುವ ಶಕ್ತಿಯನ್ನೇ ಭಾರತೀಯ ಪರಂಪರೆ ಅಗ್ನಿ ಎಂದು ಗುರುತಿಸಿದೆ,’’ ಎಂದು ಶಂಕರಾಚಾರ್ಯರ ಸೌಂದರ್ಯ ಲಹರಿ ಉಲ್ಲೇಖಿಸಿದರು.

‘‘ಅಗ್ನಿಯಲ್ಲಿಎರಡು ಗುಣ ಇವೆ. ಅದು ಬೆಳಕಾಗಿ ಬೆಳಗುತ್ತದೆ ಹಾಗೂ ಅದು ಸುಡುವ ಗುಣವನ್ನೂ ಹೊಂದಿದೆ. ಜೀವಿಯ ಹೃದಯದಲ್ಲಿಜೀವಜ್ಯೋತಿಯಾಗಿ ಬೆಳಗಿದರೆ, ನಾಭಿ ಸ್ಥಾನದಲ್ಲಿಸುಡುವ ಗುಣದೊಂದಿಗೆ ಸ್ವೀಕರಿಸಿದ ಆಹಾರ ಪಚನಗೊಳಿಸಿ, ಅಮೃತವನ್ನು ದೇಹಕ್ಕೆ ಒದಗಿಸಿ, ಬೇಡದ ವಸ್ತುಗಳನ್ನು ದೇಹದಿಂದ ಹೊರಹಾಕುವಂತೆ ಮಾಡುತ್ತದೆ,’’ ಎಂದು ಅಭಿಪ್ರಾಯಪಟ್ಟರು.

ಹಿರಿಯ ನ್ಯಾಯವಾದಿಗಳಾದ ಅರುಣ್ ಶ್ಯಾಮ್ , ಪಿ.ಎನ್ . ಮನಮೋಹನ್ , ಶಂಭುಶರ್ಮಾ, ನರಸಿಂಹ, ಸ್ಥಳೀಯ ಮುಖಂಡ ಮಹೇಶ್ ಶೆಟ್ಟಿ ಶ್ರೀಗಳಿಂದ ಆಶೀರ್ವಾದ ಪಡೆದರು. ಜಾಲತಾಣಿಗರ ಬಳಗದ ಪರವಾಗಿ ಉದಯಶಂಕರ ನೀರ್ಪಾಜೆ ದಂಪತಿ ಗುರುಭಿಕ್ಷಾಸೇವೆ ಸಮರ್ಪಿಸಿದರು. ಜಾಲತಾಣಿಗರ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಬಾಕ್ಸ್ :

ಸ್ವರ್ಣಪಾದುಕಾ ಪೂಜೆ

ಶ್ರೀರಾಮಚಂದ್ರಾಪುರ ಮಠಕ್ಕೆ ಪಾರಂಪರಿಕವಾಗಿ ನಡೆದುಕೊಳ್ಳುತ್ತಿರುವ ಅಂಬಿಗ- ವಿಶ್ವಕರ್ಮ ಸಮಾಜದ ಗುರುಬಂಧುಗಳಿಂದ ಸ್ವರ್ಣಪಾದುಕಾ ಪೂಜೆ ನೆರವೇರಿತು. ಸಮಾಜ ಬಂಧುಗಳನ್ನು ಶ್ರೀಗಳು ಆಶೀರ್ವದಿಸಿ, ಮಂತ್ರಾಕ್ಷತೆ ನೀಡಿದರು. ಅಂಬಿಗ ಸಮಾಜದ ಗುರು ಅಂಬಿಗ, ಮಹೇಶ ಗೋವಿಂದ ಅಂಬಿಗ, ಮಂಜುನಾಥ ಶಂಕರ ಅಂಬಿಗ, ವಿಶ್ವಕರ್ಮ ಸಮಾಜದ ಶಂಭು ಅಚಾರಿ ವಂದೂರು, ಮಧುಕರ ಆಚಾರಿ ಹೊನ್ನಾವರ, ಜಗದೀಶ ಆಚಾರಿ ಮಿರ್ಜಾನ, ಗಣೇಶ ಆಚಾರಿ ಹೆಬ್ಬನಕೇರೆ ಸೇರಿದಂತೆ ಸಮಾಜದ ನೂರಾರು ಭಕ್ತರು ಉಪಸ್ಥಿತರಿದ್ದರು.

15 ಜಿ. ಕೆ. ಎನ್ 10 ಏ, ಬೀ, ಸಿ :

ವಿಶ್ವಕರ್ಮ, ಅಂಬಿಗ ಸಮಾಜ ಗುರುಬಂಧುಗಳಿಂದ ಸ್ವರ್ಣಪಾದುಕಾ ಪೂಜೆ ನೆರವೇರಿತು.

15 ಜಿ. ಕೆ. ಎನ್ 10 ಡಿ, ಈ:

ಕಾರ್ಯಕ್ರಮದಲ್ಲಿಶ್ರೀಗಳು ಆಶೀರ್ವಚನ ನೀಡಿದರು.