ಬಿ.ಸಿ.ರೋಡ್ ಪುದು ದ.ಕ. ಜಿಲ್ಲಾಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಶಾಲಾ ಎಸ್ ಡಿಎಂಸಿ ಅಧ್ಯಕ್ಷ ರಮ್ಲಾನ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವದ ಮಹತ್ವ ಹಾಗೂ ದೇಶದ ಅಭಿವೃದ್ಧಿಯಲ್ಲಿವಿದ್ಯಾರ್ಥಿಗಳ ಪಾತ್ರದ ಕುರಿತು ಸಂದೇಶ ನೀಡಿದರು.
ಟುಡೇ ಫೌಂಡೇಶನ್ನ ಉಮ್ಮರ್ ಫಾರೂಕ್ ಮಾತನಾಡಿ, ಶಿಕ್ಷಣದ ಜತೆಗೆ ದೇಶಭಕ್ತಿ, ಸಾಮಾಜಿಕ ಹೊಣೆಗಾರಿಕೆ ಹಾಗೂ ಉತ್ತಮ ಮೌಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಯುವ ಉದ್ಯಮಿ ತೌಫಿಕ್ ವಳಚ್ಚಿಲ್ ಭಾಗವಹಿಸಿದ್ದರು. ಎಸ್ ಡಿಎಂಸಿ ಉಪಾಧ್ಯಕ್ಷೆ ನೌಶೀದಾ ಬಾನು, ಗ್ರಾಮ ಪಂಚಾಯಿತಿ ಸದಸ್ಯರಾದ ಸಾರಮ್ಮ, ರಝೀಯಾ, ಇಶಾಮ್ , ಮಹಮ್ಮದ್ , ಮಾಜಿ ಅಧ್ಯಕ್ಷೆ ರಶೀದಾ ಬಾನು, ಮಾಜಿ ಉಪಾಧ್ಯಕ್ಷ ಇಕ್ಬಾಲ್ ಸುಜೀರ್ , ಪ್ರಮುಖರಾದ ಬದ್ರುದ್ದೀನ್ ಮಾರಿಪಳ್ಳ, ಸಲಾಂ ಮಲ್ಲಿ, ನಜೀರ್ , ಮೈಮುನ, ಸಾರಮ್ಮ, ರುಕ್ಸಾನ ಸೇರಿದಂತೆ ಎಸ್ ಡಿಎಂಸಿ ಸದಸ್ಯರು, ಹಳೆಯ ವಿದ್ಯಾರ್ಥಿ ಬಳಗ, ಪೋಷಕರು, ಅಂಗನವಾಡಿ ಶಿಕ್ಷಕಿ, ಸಿಬ್ಬಂದಿ, ಅಕ್ಷರ ದಾಸೋಹ ಸಿಬ್ಬಂದಿ ಹಾಗೂ ಶಿಕ್ಷಕಿಯರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಜಯಂತಿ ಸ್ವಾಗತಿಸಿದರು. ಸಿಲ್ವಿಯಾ ಸ್ವಿಕೇರಾ ವಂದಿಸಿದರು. ಶಾಲೆಟ್ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು