ಭಟ್ಕಳ : ಲೋಕಾಯುಕ್ತ ಅಧಿಕಾರಿಗಳು ಗುರುವಾರ ಇಲ್ಲಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದರು.ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ನೇತೃತ್ವದಲ್ಲಿಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ಆಹಾರ ಪೂರೈಕೆ, ಕಿಟ್ ವಿತರಣೆಯ ಬಗ್ಗೆ ಮಾಹಿತಿ ಕಲೆ ಹಾಕಿದರು. ಈ ಸಂದರ್ಭದಲ್ಲಿಅಲ್ಪಸಂಖ್ಯಾತರ ಇಲಾಖೆಯ ವಿಸ್ತರಣಾಧಿಕಾರಿ ಸಂಶುದ್ದೀನ್ ಉಪಸ್ಥಿತರಿದ್ದರು. ಭಟ್ಕಳ ಅಲ್ಪಸಂಖ್ಯಾತರ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿಸ್ವಚ್ಛತೆಯನ್ನು ಕಡೆಗಣಿಸಿರುವುದು ಕಂಡು ಬಂದಿದೆ. ಇಲ್ಲಿನ ಪರಿಸ್ಥಿತಿಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
20ಬಿಕೆಎಲ್ 1
ಲೋಕಾಯುಕ್ತ ಅಧಿಕಾರಿಗಳು ಭಟ್ಕಳ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದರು.