ವಿಕ ಸುದ್ದಿಲೋಕ ಚಿಕ್ಕೋಡಿಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದು, ಸಮಾಜದ ಮುಖ್ಯವಾಹಿನಿಗೆ ತರುವಲ್ಲಿಮಹತ್ವದ ಪಾತ್ರವಹಿಸಿದ್ದಾರೆ ಎಂದು ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ ಹೇಳಿದರು.
ತಾಲೂಕು ಆಡಳಿತದಿಂದ ಇಲ್ಲಿನ ತಾಪಂ ಸಭಾಂಗಣದಲ್ಲಿಗುರುವಾರ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘‘ಹಿಂದುಳಿದ ವರ್ಗಗಳ, ಬಡವರ ಆರ್ಥಿಕ ಸ್ವಾವಲಂಬನೆಗೆ ದಾರಿ ತೋರಿಸಿ,ಅವರಿಗೆ ಉತ್ತಮ ಬದುಕು ಕಟ್ಟಿಕೊಟ್ಟ ಮಹಾನ್ ಚೇತನ ಡಿ. ದೇವರಾಜ ಅರಸು. ಜಾತಿ ಪದ್ಧತಿ ಸೇರಿದಂತೆ ಸಮಾಜದಲ್ಲಿದ್ದ ಅನಿಷ್ಠ ಪದ್ಧತಿ ನಿರ್ಮೂಲನೆಗೆ ಕ್ರಮ ಕೈಗೊಂಡ ಅವರು, ಉಳುವವನೇ ಭೂ ಒಡೆಯ ಎಂಬ ಶಾಸನ ಜಾರಿಗೆ ತಂದು ಬಡ ಜನರಿಗೂ ಭೂಮಿ ಸಿಗುವಂತೆ ಮಾಡಿದರು. ಯುವ ಪೀಳಿಗೆ ಅವರ ಆದರ್ಶ, ಸಮಾಜಮುಖಿ ಕಾರ್ಯಗಳನ್ನು ತಿಳಿದುಕೊಳ್ಳುವುದರ ಜೊತೆಗೆ ಬದುಕಿನಲ್ಲಿಅಳವಡಿಸಿಕೊಳ್ಳಬೇಕು,’’ ಎಂದರು.
ಮಜಲಟ್ಟಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹನುಮಂತ ಟಕ್ಕನವರ ಉಪನ್ಯಾಸ ನೀಡಿದರು. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿಸನ್ಮಾನಿಸಲಾಯಿತು. ತಹಸೀಲ್ದಾರ ರಾಜೇಶ ಬುರ್ಲಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ ಹುಕ್ಕೇರಿ, ಚಿಕ್ಕೋಡಿ ಜಿಲ್ಲಾರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಎ.ಕುಂಬಾರ, ಗ್ಯಾರಂಟಿ ಯೋಜನೆ ಅನುಷ್ಠಾನಗಳ ಸಮಿತಿ ಅಧ್ಯಕ್ಷ ರಮೇಶ ಪಾಟೀಲ, ಸಿಪಿಐ ವಿಶ್ವನಾಥ ಚೌಗಲಾ, ಪುರಸಭೆ ಮುಖ್ಯಾಧಿಕಾರಿ ಜಗದೀಶ ಈಟಿ, ಹಿಂದುಳಿದ ವರ್ಗಗಳ ತಾಲೂಕಾ ಕಲ್ಯಾಣಧಿಕಾರಿ ವೀಣಾ ಮನಗೂಳಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಅರ್ಚನಾ ಸಾನೆ, ಬಿಸಿಎಂ ವಿಸ್ತರಣಾಧಿಕಾರಿ ನಾಗರಾಜ ಕರನಿಂಗ, ಮುರಗೇಶ ಕಟಕಭಾವಿ ಹಾಗೂ ಇತರರು ಇದ್ದರು.
ಪೋಟೊ20ಸಿಕೆಡಿ10
ಚಿಕ್ಕೋಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿನಡೆದ ಡಿ.ದೇವರಾಜ ಅರಸು ಜನ್ಮ ದಿನ ಕಾರ್ಯಕ್ರಮದಲ್ಲಿಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ ಮಾತನಾಡಿದರು.