ಸಾಲ ಸೌಲಭ್ಯಕ್ಕಾಗಿ ಅರ್ಜಿ ಯಾದಗಿರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವು 2026-27ನೇ ಸಾಲಿನಲ್ಲಿಅನು?ಾ್ಠನಗೊಳಿಸುತ್ತಿರುವ ವಿವಿಧ ಯೋಜನೆಗಳಡಿಯಲ್ಲಿಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ (ಕ್ರಿಶ್ಚಿಯನ್ ಸಮುದಾಯ ಹೊರತುಪಡಿಸಿ) ಅಂದರೆ ಮುಸಲ್ಮಾನರು, ಜೈನರು, ಭೌದ್ಧ ಧರ್ಮಿಯರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾವ್ಯವಸ್ಥಾಪಕರು ತಿಳಿಸಿದ್ದಾರೆ. ಅರಿವು (ವಿದ್ಯಾಭ್ಯಾಸ ಸಾಲ)ಯೋಜನೆ (ರಿನಿವಲ್ ), ಸ್ವಾವಲಂಭಿ ಸಾರಥಿ ಯೋಜನೆ, ಶ್ರಮಶಕ್ತಿ ಯೋಜನೆ, ವೃತ್ತಿಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ (ವೈಯಕ್ತಿಕ ಕೊಳವೆಬಾವಿ, ಏತ ನೀರಾವರಿ ಯೋಜನೆ), ನವೋದಯ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್ /ಕಿಚನ್ ಫುಡ್ ಕಿಯೋಸ್ ಯೋಜನೆ, ಮಹಿಳಾ ಸ್ವ-ಸಹಾಯ ಸಂಘ ಯೋಜನೆ, ಸಮುದಾಯ ಆಧಾರಿತ ತರಬೇತಿ ಯೋಜನೆ, ಸಿಖ್ಖಲಿಗಾರ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆ, ವ್ಯಾಪಾರ/ಉದ್ದಿಮೆ ನೇರಸಾಲ ಯೋಜನೆ, ವಿದೇಶಿ ವ್ಯಾಸಾಂಗಕ್ಕೆ ಸಾಲ ಯೋಜನೆ ಹಾಗೂ ಸಾಂತ್ವನ ಯೋಜನೆಗೆ ಅರ್ಹರು ಅಗತ್ಯ ದಾಖಲಾತಿ ಗಳೊಂದಿಗೆ ನಿಗಮದ ವೆಬ್ ಸೈಟ್ hಠಿಠಿps://kಞd್ಚಟ್ಞ್ಝಜ್ಞಿಛಿ.ka್ಟ್ಞaಠಿaka.ಜಟv.ಜ್ಞಿ ಆನ್ ಲೈನ್ ಮೂಲಕ ಸೆ.17ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂ:8277799990 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿತಿಳಿಸಿದ್ದಾರೆ. ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಯಾದಗಿರಿ: ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಯಿತ ಸಂಘ ಸಂಸ್ಥೆಗಳಿಗೆ ಧನಸಹಾಯ ನೀಡಲು ಮತ್ತು ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2026-27ನೇ ಸಾಲಿನ ಸಾಮನ್ಯ/ ಪರಿಶಿÐ್ಟ… ಜಾತಿ/ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 4ರವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಈ ಮೊದಲು ಆ.20ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ಅರ್ಹ ಅಭ್ಯರ್ಥಿಗಳು ಮತ್ತು ಸಂಸ್ಥೆಗಳ ಅನುಕೂಲಕ್ಕಾಗಿ ಮತ್ತೆ 15 ದಿನಗಳು ಕಾಲಾವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ. ಅರ್ಹರು ಸೇವಾಸಿಂಧು ಪೋರ್ಟಲ್ ಖಛಿvasಜ್ಞಿdh್ಠ.ka್ಟ್ಞaಠಿaka.ಜಟv.ಜ್ಞಿ ಮೂಲಕ ಆನ್ ಲೈನ್ ನಲ್ಲಿಅರ್ಜಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾ ಗುವುದಿಲ್ಲ. ಹಾಗೆಯೇ ಇಲಾಖೆಯ ಕಚೇರಿಯಲ್ಲಿನೇರವಾಗಿ ಅರ್ಜಿಗಳನ್ನು ಸ್ವೀಕರಿಸಲಾ ಗುವುದಿಲ್ಲ. ನಿಮಗೆ ಯಾವುದೇ ಮಾಹಿತಿ, ಅರ್ಜಿ ವಿವರಗಳು ಅಥವಾ ಇಲಾಖೆಯ ಮಾರ್ಗದರ್ಶಿÓ Üೂಚಿಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಾದಗಿರಿ ಜಿಲ್ಲೆಇವರ ದೂರವಾಣಿ ಸಂಖ್ಯೆ: 08473 253721ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.