ವಿಬಿ ಜಿ ರಾಮ್ ಜಿ ಕೆಲಸ ಪಡೆಯಿರಿ

Contributed byphanumanthu14@gmail.com|Vijaya Karnataka
get employment in your own village through vbg ramji scheme
ವಿಕ ಸುದ್ದಿಲೋಕ ಯಾದಗಿರಿ ನಗರದಲ್ಲಿಕೂಲಿ ಕೆಲಸಕ್ಕಾಗಿ ಕಾರ್ಮಿಕರು ಕಾಯುತ್ತಾ ನಿಲ್ಲುವ ಅಗತ್ಯವಿಲ್ಲ. ನಿಮ್ಮ ಸ್ವಂತ ಗ್ರಾಮ ಪಂಚಾಯಿತಿಯಲ್ಲೇ ವಿಬಿ ಜಿ ರಾಮ್ ಜಿ ಯೋಜನೆಯಡಿ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಿ ಎಂದು ಕೂಲಿ ಕಾರ್ಮಿಕರಿಗೆ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಸಲಹೆ ನೀಡಿದರು. ಪಟ್ಟಣದ ಮುಖ್ಯ ರಸ್ತೆಯಲ್ಲಿಕೆಲಸಕ್ಕಾಗಿ ಕಾಯುತ್ತಿದ್ದ ಕೂಲಿ ಕಾರ್ಮಿಕರೊಂದಿಗೆ ಮಾತನಾಡಿದ ಅವರು, ವಿಬಿ ಜಿ ರಾಮ್ ಜಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿವಿಬಿ ಜಿ ರಾಮ್ ಜಿ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕಾರ್ಮಿಕರು ನಗರಗಳಿಗೆ ವಲಸೆ ಬರುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಒಂದು ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಕೆಲಸ ನೀಡಲಾಗುತ್ತಿದ್ದು, ಪ್ರತಿದಿನಕ್ಕೆ 382 ರೂ. ದಿನಗೂಲಿ ನಿಗದಿಪಡಿಸಲಾಗಿದೆ ಎಂದರು. ಕೆರೆ ಅಭಿವೃದ್ಧಿ, ಜಲ ಸಂರಕ್ಷಣೆ, ಮಣ್ಣಿನ ಸಂರಕ್ಷಣೆ, ಸಸಿ ನೆಡುವಿಕೆ ಹಾಗೂ ವೈಯಕ್ತಿಕ ಕಾಮಗಾರಿಗಳಾದ ಕೃಷಿ ಹೊಂಡ, ದನದ ಕೊಟ್ಟಿಗೆ ಮತ್ತು ಕೋಳಿ ಸಾಕಾಣಿಕೆ ಶೆಡ್ ಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಸ್ವಗ್ರಾಮದಲ್ಲೇ ಉದ್ಯೋಗ ದೊರೆಯುವುದರಿಂದ ಕಾರ್ಮಿಕರ ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ ಹಾಗೂ ಆರ್ಥಿಕ

ಭದ್ರತೆಗೆ ಹೆಚ್ಚಿನ ನೆರವಾಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ
ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.