ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

Contributed bymallugoudra461987@gmali.com|Vijaya Karnataka
opportunity to submit objections for anganwadi positions
ಬೆಳಗಾವಿ: ಜಿಲ್ಲೆಯ 14 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಜಿಲ್ಲಾಮಟ್ಟದ ಸಮಿತಿಯಲ್ಲಿಆಯ್ಕೆ ಮಾಡಲಾಗಿದೆ. ತಾತ್ಕಾಲಿವಾಗಿ ಆಯ್ಕೆ ಮಾಡಲಾಗಿರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗಳಿಗೆ ಯಾವುದಾದರೂ ಆಯ್ಕೆ ಸಂಬಂಧ ಆಕ್ಷೇಪಣೆಗಳು ಇದ್ದಲ್ಲಿಆ. 31ರೊಳಗೆ ಸೂಕ್ತ ದಾಖಲಾತಿಗಳೊಂದಿಗೆ ಸಂಬಂಧಿಸಿದ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.