* ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಿ’* ಅಧಿಕಾರಿಗಳಿಗೆ ಡಿಸಿ ಡಾ.ಸುರೇಶ್ ಇಟ್ನಾಳ್ ಸೂಚನೆ
*ಯೋಜನೆ ಅನುಷ್ಠಾನದಲ್ಲಿವಿಳಂಬ ಸಲ್ಲ
ವಿಕ ಸುದ್ದಿಲೋಕ ಕೊಪ್ಪಳ
‘‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಅಧಿಕಾರಿಗಳು ಕ್ರಮವಹಿಸಬೇಕು,’’ ಎಂದು ಜಿಲ್ಲಾಧಿಕಾರಿ ಡಾ.ಸುರೇಶ್ ಬಿ.ಇಟ್ನಾಳ್ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಶುಕ್ರವಾರ ನಡೆದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿಮಾತನಾಡಿದರು.
‘‘ಈ ಯೋಜನೆಯಡಿ ಮೀಸಲಾದ ಅನುದಾನವು ಅರ್ಹ ಫಲಾನುಭವಿಗಳಿಗೆ ಸಮರ್ಪಕ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿವಿಳಂಬವಾಗದಂತೆ
ನಿಗದಿತ ಅವಧಿಯಲ್ಲಿಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಬಾಕಿ ಇರುವ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಅನುದಾನದ ಸಮರ್ಪಕ ಬಳಕೆಗೆ ಆದ್ಯತೆ ನೀಡಬೇಕು,’’ ಎಂದರು.
‘‘ಯೋಜನೆಯ ಮೂಲ ಧ್ಯೇಯ ಮತ್ತು ಮಾನದಂಡಗಳಿಗೆ ಅನುಸಾರವಾಗಿ ಇಲಾಖೆಗಳು ಕಾರ್ಯನಿರ್ವಹಿಸಬೇಕು. ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು. ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು
ಯಾವ ಉದ್ದೇಶಕ್ಕೆ ಬಳಸಲಾಗಿದೆ, ಯಾವ ಪ್ರದೇಶದಲ್ಲಿಕಾಮಗಾರಿ ಮಾಡಲಾಗಿದೆ ಎಂಬ ಮಾಹಿತಿಯನ್ನು ಸ್ಪಷ್ಟ ವಾಗಿ ನೀಡಬೇಕು. ಇಲಾಖೆಗಳಿಗೆ ನಿಗದಿಪಡಿಸಲಾದ ಗುರಿಯನ್ನು
ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು,’’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ, ‘‘ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾರ್ಯಕ್ರಮಗಳುನ್ನು ನಿಗದಿತ ಗುರಿಯಂತೆ ಅನುಷ್ಠಾನಗೊಳ್ಳಬೇಕು.
ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಸರಕಾರದ ಸೌಲಭ್ಯಗಳನ್ನು ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು,’’ ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೂಗಲದ್ , ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜೆ.ಡಿ ಕೃಷ್ಣ ಮೂರ್ತಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣ ಉಕ್ಕುಂದ್ , ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಪಿ.ಎಂ.ಮಲ್ಲಯ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಉಪನಿರ್ದೇಶಕ ವಿಶ್ವನಾಥ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅಮರೇಶ್ , ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಗದೀಶ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ್ ಉಪಸ್ಥಿತರಿದ್ದರು.
========
ಪ್ರಗತಿ ಪರಿಶೀಲನೆ
ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿನಡೆದ ಸಭೆಯಲ್ಲಿಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ, ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಇಲಾಖಾ ವಾರು ಪ್ರಗತಿ ಪರಿಶೀಲನೆ ನಡೆಯಿತು.
==
21-ಕೆಪಿಎಲ್ ವಿಠ್ಠಲ ಫೊಟೊ-24
ಕೊಪ್ಪಳ ಜಿಲ್ಲಾಧಿಕಾ ಕಚೇರಿ ಸಭಾಂಗಣದಲ್ಲಿಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ ಕುರಿತು ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.