ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನವನ್ನು ಸಮಿತಿ ಅಧ್ಯಕ್ಷ ವಿ.ಎ.ಲಾರೆನ್ಸ್ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿಆಚರಿಸಲಾಯಿತು.ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಕಾರ್ಯಕ್ರಮದಲ್ಲಿಮಾತನಾಡಿದ ವಿ.ಎ. ಲಾರೆನ್ಸ್ , ‘‘ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರು ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ರಾಜೀವ್ ಗಾಂಧಿಯವರು ಯುವಜನತೆ ಹಾಗೂ ತಂತ್ರಜ್ಞಾನಕ್ಕೆ ಆದ್ಯತೆ ನೀಡಿದರೆ, ದೇವರಾಜ ಅರಸರು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದರು. ಇಬ್ಬರು ಮಹಾನ್ ವ್ಯಕ್ತಿಗಳ ಜನ್ಮದಿನವನ್ನು ಜನಸೇವೆಯ ಮೂಲಕ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ,’’ ಎಂದರು.
ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಡಿ.ಯು.ಕಿರಣ್ , ಜಿಲ್ಲಾಮಹಿಳಾ ಘಟಕದ ಉಪಾಧ್ಯಕ್ಷೆ ಶೀಲಾ ಡಿ.ಸೋಜಾ, ನಗರ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ , ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಮಂಜುಳಾ ಹರೀಶ್ , ಸೈಮನ್ ಮತ್ತಿತರರು ಇದ್ದರು.
ಎಂಡಿಕೆ20ಎಸ್ ಪಿಟಿ7:
ಸೋಮವಾರಪೇಟೆ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮದಿನದ ಅಂಗವಾಗಿ ಹಣ್ಣು ಹಂಪಲು ವಿತರಿಸಲಾಯಿತು.