ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ನಾಳೆ ವಿಧಾನಸೌಧ ಮುತ್ತಿಗೆ?

Contributed byKeerthi Prasad|Vijaya Karnataka
bjp protest will there be a lockdown at vidhana soudha tomorrow
ಬೆಂಗಳೂರು: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ವಿಧಾನಮಂಡಲದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸುತ್ತಿರುವ ಬಿಜೆಪಿ ಯು ಸೋಮವಾರ ನಗರದ ಫ್ರೀಡಂ ಪಾರ್ಕ್ನಲ್ಲಿಬೃಹತ್ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಚಿಂತನೆ ನಡೆಸಿದೆ. ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ .ಅಶೋಕ್ ನೇತೃತ್ವದಲ್ಲಿಶನಿವಾರ ರಾಜ್ಯ ಬಿಜೆಪಿ ಕಚೇರಿಯಲ್ಲಿವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯ ಸಚೇತಕ ಎನ್ .ರವಿಕುಮಾರ್ ಸೇರಿದಂತೆ ಬೆಂಗಳೂರಿನ ಮೂರು ಸಂಘಟನಾ ಜಿಲ್ಲೆಗಳ ಅಧ್ಯಕ್ಷರೊಂದಿಗೆ ನಡೆದ ಸಭೆಯಲ್ಲಿಪ್ರತಿಭಟನೆ ಆಯೋಜನೆಗೆ ಸಂಬಂಧಪಟ್ಟಂತೆ ಪೂರ್ವ ಸಿದ್ಧತೆಗಳ ಕುರಿತು ಚರ್ಚೆಯಾಯಿತು. ಫ್ರೀಡಂ ಪಾರ್ಕ್ನಲ್ಲಿಬೃಹತ್ ಪ್ರತಿಭಟನೆ ನಡೆಸಿ ಬಳಿಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಬಗ್ಗೆಯೂ ಸಭೆಯಲ್ಲಿಸಮಾಲೋಚನೆ ನಡೆಸಿದ್ದು, ಸೋಮವಾರ ವಿಧಾನಮಂಡಲ ಅಧಿವೇಶನ ಆರಂಭಕ್ಕೂ ಮೊದಲೇ ಪ್ರತಿಭಟನೆ ನಡೆಸಿ ಹೋರಾಟದ ತೀವ್ರತೆ ಕಾಯ್ದುಕೊಳ್ಳಲು ಬಿಜೆಪಿ ಸಜ್ಜಾಗಿದೆ.