ವಿಕ ಸುದ್ದಿಲೋಕ ಬೆಳಗಾವಿಮಕ್ಕಳಲ್ಲಿಅಡಗಿರುವ ವಿಶಿಷ್ಟ ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸಲು ‘ಚಿಗುರು’ ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಎಂದು ಹಿರಿಯ ಸಾಹಿತಿ ರವಿ ಕೋಟಾರಗಸ್ತಿ ಅಭಿಪ್ರಾಯಪಟ್ಟರು.
ನಗರದ ಸಂತ ಮೀರಾ ಆಂಗ್ಲಮಾಧ್ಯಮ ಶಾಲೆಯಲ್ಲಿಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಆಯೋಜಿಸಿದ್ದ ಒಂದು ದಿನದ ಮಕ್ಕಳ ಹಬ್ಬ ಚಿಗುರು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ‘‘ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿಸಾಧನೆಗೈದ ಪ್ರತಿಭೆಗಳಿಗೆ ತಮ್ಮ ಕಲೆಯನ್ನು ಪ್ರದರ್ಶಿಸಲು ಇದು ಉತ್ತಮ ಅವಕಾಶವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿಇಂತಹ ಸಾಂಸ್ಕೃತಿಕ ವೇದಿಕೆಗಳು ಮಕ್ಕಳನ್ನು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳಿಸಿ, ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ನೆರವಾಗಲಿವೆ,’’ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಪ್ರಾಸ್ತಾವಿಕ ಮಾತನಾಡಿ, ‘‘ಸಾಹಿತ್ಯ ಮತ್ತು ಸಂಗೀತವನ್ನು ಜೀವನದಲ್ಲಿಅಳವಡಿಸಿಕೊಂಡರೆ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ,’’ ಎಂದು ಹೇಳಿದರು.
ಬೆಳಗಾವಿ ಲೇಖಕಿಯರ ಸಂಘದ ಅಧ್ಯಕ್ಷೆ ರಾಜನಂದಾ ಗಾರ್ಗಿ ಮಾತನಾಡಿ, ‘‘ಮಕ್ಕಳಿಗೆ ಕೇವಲ ಪಠ್ಯ ಶಿಕ್ಷಣ ನೀಡುವುದಷ್ಟೇ ಅಲ್ಲದೆ, ಅವರಲ್ಲಿಸಾಹಿತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಮೈಗೂಡಿಸಿಕೊಳ್ಳಲು ಪ್ರೇರೇಪಿಸಬೇಕು,’’ ಎಂದು ಸಲಹೆ ನೀಡಿದರು.
ನಾನಾ ತಂಡಗಳಿಂದ ಸಂಗೀತ, ಜಾನಪದ ನೃತ್ಯ, ಏಕಪಾತ್ರಾಭಿನಯ ಸೇರಿದಂತೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯ ಭೀಮಪ್ಪ ಹುದ್ದಾರ, ಹಿರಿಯ ಕಲಾವಿದ ರಾಜಪ್ರಭು ಧೋತ್ರೆ, ರವಿಂದ್ರ ಶರ್ಮಾ, ಸಂತ ಮೀರಾ ಆಂಗ್ಲಮಧ್ಯಮ ಶಾಲೆಯ ಪ್ರಾಂಶುಪಾಲೆ ಸುಜಾತಾ ದಫ್ತರದಾರ ಸೇರಿದಂತೆ ಇನ್ನಿತರರು ಇದ್ದರು.
- 22ಸಿಕೆಡಿ13
ಬೆಳಗಾವಿಯ ಸಂತ ಮೀರಾ ಆಂಗ್ಲಮಾಧ್ಯಮ ಶಾಲೆಯಲ್ಲಿಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಹಬ್ಬ ಚಿಗುರು ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.