‘ದಲಿತ ಕುಂದು ಕೊರತೆ ಸಭೆಯಲ್ಲಿಲೋಪವಾಗಿಲ್ಲ’

Contributed byvkbedra@gmail.com|Vijaya Karnataka
it is wrong to suspend the dalit issues meeting
ವಿಕ ಸುದ್ದಿಲೋಕ ಮೂಡುಬಿದಿರೆ

ತಹಸೀಲ್ದಾರ್ ನೇತೃತ್ವದಲ್ಲಿನಡೆದ ಎಸ್ ಸಿ-ಎಸ್ ಟಿ ಕುಂದುಕೊರತೆ ಸಭೆಯಲ್ಲಿಯಾವುದೇ ಲೋಪವಾಗಿಲ್ಲಎಂದು ಸುವರ್ಣ ಕರ್ನಾಟಕ ಜೈಭೀಮ್ ಯುವ ಸೇನೆ ರಾಜ್ಯಾಧ್ಯಕ್ಷ, ಸಂಸ್ಥಾಪಕ ವರ್ತೂರ್ ಮಂಜುನಾಥ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ದಲಿತ ಸಂಘಟನೆಯೊಂದು ಈ ಬಗ್ಗೆ ಅಪಸ್ವರ ಎತ್ತಿರುವುದು ಸರಿಯಲ್ಲ. ಸಭೆಯಲ್ಲಿಸುಮಾರು 25ರಿಂದ 30 ಮಂದಿ ಇದ್ದರು. ಕೆಲವರು ಸಭೆಯಿಂದ ಹೊರಗೆ ತೆರಳಿದ ಬಳಿಕವೂ ಸಮಸ್ಯೆಗಳ ಕುರಿತು ಚರ್ಚೆ ಮುಂದುವರಿಯಿತು. ತಹಸೀಲ್ದಾರ್ ಅವರು ಹಲವು ವಿಚಾರಗಳಿಗೆ ಸ್ಪಂದಿಸಿದ್ದು ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡುವುದಾಗಿ ತಿಳಿಸಿದ್ದರು. ಆದರೆ ವಿಷಯವನ್ನು ಸಂಪೂರ್ಣವಾಗಿ ತಿಳಿದುಕೊಳ್ಳದೆ ಸಭೆಯ ವಾತಾವರಣವನ್ನು ಬದಲಿಸುವ ರೀತಿಯಲ್ಲಿಏರಿದ ಧ್ವನಿಯಲ್ಲಿಮಾತನಾಡುವುದು ಸರಿಯಲ್ಲಎಂದರು.

ಡಿಸಿ ಮನ್ನಾ ಜಾಗ, ಪೌತಿ ಖಾತೆ ಹಾಗೂ ಎಸ್ ಸಿ ಸಮುದಾಯದ ಪೂರ್ವಿಕರ ಹೆಸರಿನಲ್ಲಿರುವ ಜಾಗಗಳ ಸಮಸ್ಯೆಯನ್ನೂ ಸಭೆಯಲ್ಲಿಪ್ರಸ್ತಾಪಿಸಲಾಗಿದೆ. ಪೂರ್ವಿಕರ ಹೆಸರಿನಲ್ಲಿರುವ ಜಾಗಗಳನ್ನು ಅವರ ಮಕ್ಕಳು ಮತ್ತು ಮೊಮ್ಮಕ್ಕಳು ಅನುಭವಿಸುವ ಅವಕಾಶ ಸಿಗದಿರುವ ಬಗ್ಗೆ ಗಮನ ಸೆಳೆಯಲಾಗಿದೆ. ಈ ವಿಚಾರದಲ್ಲಿಆಂದೋಲನ ನಡೆಸುವ ಮೂಲಕ ಆರ್ಥಿಕವಾಗಿ ಬೆಳೆಯಲು ಹಾಗೂ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಅಧಿಕಾರಿಗಳು ಸ್ಪಂದಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಸುವರ್ಣ ಕರ್ನಾಟಕ ಜೈಭೀಮ್ ಯುವ ಸೇನೆ ಮೂಡುಬಿದಿರೆ ತಾಲೂಕು ಘಟಕ ಸದಸ್ಯ ರಾಜೇಶ, ಮೂಡುಬಿದಿರೆ ತಾಲೂಕು ಘಟಕದ ಸಹ ಕಾರ್ಯದರ್ಶಿ ಸಂತೋಷ್ ಕುಮಾರ್ , ಉಡುಪಿ ಜಿಲ್ಲಾಘಟಕದ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಾರ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಸದಸ್ಯ ಹಾಗೂ ಮೂಡುಬಿದಿರೆ ತಾಲೂಕು ಘಟಕದ ಸದಸ್ಯ ದಯಾನಂದ್ ಹಾಗೂ ಮೂಡುಬಿದಿರೆ ತಾಲೂಕು ಘಟಕದ ಸದಸ್ಯ ಸುನಿಲ್ ಅವರು ಪತ್ರಿಕಾಗೋಷ್ಠಿಯಲ್ಲಿಉಪಸ್ಥಿತರಿದ್ದರು.