ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಎಂಬಲ್ಲಿಕಾರೊಂದು ಹೆದ್ದಾರಿ ಮಧ್ಯದಲ್ಲಿತಾತ್ಕಾಲಿಕವಾಗಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ.ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿಯಾದ ರಭಸಕ್ಕೆ ಎರಡು ವಿದ್ಯುತ್ ಕಂಬಗಳು ತುಂಡಾಗಿ ಹೆದ್ದಾರಿಗೆ ಉರುಳಿ ಬಿದ್ದಿದ್ದು, ಇನ್ನೂ ಎರಡು ಕಂಬಗಳು ವಾಲಿ ನಿಂತಿವೆ. ವಿದ್ಯುತ್ ತಂತಿಗಳು ಹೆದ್ದಾರಿಯಲ್ಲೇ ಬಿದ್ದಿದ್ದರಿಂದ ಕೆಲಕಾಲ ವಾಹನ ಸವಾರರಲ್ಲಿಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಕಾರಿನಲ್ಲಿಇಬ್ಬರು ಪ್ರಯಾಣಿಸುತ್ತಿದ್ದು, ಈ ಪೈಕಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಹಾಗೂ ಮೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.