ಬೀದರ್ ನ ಡಿಸಿ ಕಚೇರಿಯಲ್ಲಿಸೋಮವಾರ ಕರಡು ಮತದಾರರ ಪಟ್ಟಿಯ ಪ್ರಕಟಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಸುರೇಖಾ ಅವರು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.****
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕರಡು ಪಟ್ಟಿ ಪ್ರಕಟ
ಜಿಲ್ಲೆಯಲ್ಲಿ12.20 ಲಕ್ಷ ಮತದಾರರು
ವಿಕ ಸುದ್ದಿಲೋಕ ಬೀದರ್
ಜಿಲ್ಲೆಯ ಎಲ್ಲಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ 2026ನೇ ಸಾಲಿನ ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿಒಟ್ಟು 12,20,916 ಮತದಾರರು ಕರಡು ಪಟ್ಟಿಯಲ್ಲಿದ್ದಾರೆ ಎಂದು ಜಿಲ್ಲಾಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲಾದ್ಯಂತ ಒಟ್ಟು 1579 ಮತದಾನ ಕೇಂದ್ರಗಳಿದ್ದು, 6,32,572 ಮಹಿಳಾ ಹಾಗೂ 5,88,310 ಪುರುಷ ಮತದಾರರು ಸೇರಿ 12,20,916 ಮತದಾರರಿದ್ದಾರೆ.ಇದರಲ್ಲಿ34 ತೃತೀಯ ಲಿಂಗ ಮತದಾರರು ಸೇರಿದ್ದಾರೆ.
ಬಸವಕಲ್ಯಾಣ ಕ್ಷೇತ್ರದಲ್ಲಿ2,23,745, ಹುಮನಾಬಾದ್ ನಲ್ಲಿ2,20,963, ಬೀದರ್ ದಕ್ಷಿಣದಲ್ಲಿ1,81,708, ಬೀದರ್ (ಉತ್ತರ)ನಲ್ಲಿ1,84,537, ಭಾಲ್ಕಿ ಕ್ಷೇತ್ರದಲ್ಲಿ2,11,947 ಹಾಗೂ ಔರಾದ್ ಕ್ಷೇತ್ರದಲ್ಲಿ1,98,016 ಮತದಾರರು ಸೇರಿ ಜಿಲ್ಲಾದ್ಯಂತ ಒಟ್ಟು 12,20,916 ಮತದಾರರಿದ್ದಾರೆ ಎಂದು ತಿಳಿಸಿದ್ದಾರೆ.
ಆ. 24ರಂದು ಕರಡು ಮತದಾರರ ಪಟ್ಟಿಯನ್ನು ತಯಾರಿಸಿ, ಜಿಲ್ಲೆಯ ಎಲ್ಲಮತಗಟ್ಟೆ ಕೇಂದ್ರಗಳಲ್ಲಿ, ತಹಸೀಲ್ ಕಚೇರಿ,ಸಹಾಯಕ ಆಯುಕ್ತರ ಕಚೇರಿ, ಜಿಲ್ಲಾಚುನಾವಣಾಧಿಕಾರಿ ಕಚೇರಿ ಹಾಗೂ ನಿಗದಿತ ಸ್ಥಳಗಳ ಸೂಚನಾ ಫಲಕಕ್ಕೆ ಅಂಟಿಸಿ ಪ್ರಚುರಪಡಿಸಲಾಗಿದೆ. ಜಿಲ್ಲೆಯ ಎಲ್ಲವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಯ ಪ್ರತಿಯನ್ನು ಅನುಮೋದಿತ ರಾಜಕೀಯ ಪಕ್ಷದವರಿಗೆ ನೀಡಲಾಗಿದೆ. ಈ ಕರಡು ಮತದಾರರ ಪಟ್ಟಿಯ ಕುರಿತು ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿಆ.24ರಿಂದ ಸೆ. 23ರ ಒಳಗಾಗಿ ಸಂಬಂಧಪಟ್ಟ ತಹಸೀಲ್ದಾರ್ ಕಚೇರಿಯಲ್ಲಿಸಲ್ಲಿಸಲು ಕಾಲಾವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಆಯಾ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಂಪರ್ಕಿಸಿ ಅಥವಾ ಆಯಾ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ ಹಾಗೂ ಆನ್ ಲೈನ್ ಮೂಲಕ ಮತದಾರರ ಪಟ್ಟಿಯಲ್ಲಿತಮ್ಮ ಹೆಸರು ಪರಿಶೀಲಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.