ವಿಕ ಸುದ್ದಿಲೋಕ ಬಾಗಲಕೋಟೆ‘‘ಚಿಕ್ಕಲಕಿ-ತೊದಲಬಾಗಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸುವಂತೆ ಒತ್ತಾಯಿಸಿ ಚಿಕ್ಕಲಕಿಕ್ರಾಸ್ ನಲ್ಲಿರೈತರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಜಿಲ್ಲಾಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಅವರ ಸಮಸ್ಯೆ ಆಲಿಸಿದರು.
13 ವಷÜರ್ ಗಳಿಂದ ಯೋಜನೆ ನನೆಗುದಿಗೆ ಬಿದ್ದಿರುವುದು ತಿಳಿದು ವಿಷಾದ ವ್ಯಕ್ತಪಡಿಸಿದ ಸಚಿವರು, ‘‘ಸ್ಥಳದಲ್ಲಿಯೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ರೈತರ ಬಹುದಿನಗಳ ಬೇಡಿಕೆಯಾಗಿರುವ ಯೋಜನೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಿ ನೀರಾವರಿಗೆ ಅವಕಾಶ ಕಲ್ಪಿಸುವುದಾಗಿ,’’ ಭರವಸೆ ನೀಡಿದರು.
ಯೋಜನೆಯ ಕಾಮಗಾರಿಯನ್ನು ತಾವೇ ಖುದ್ದಾಗಿ ಪರಿಶೀಲಿಸುವುದಾಗಿ ತಿಳಿಸಿದ ಸಚಿವರು, ಕಾಮಗಾರಿ ಪ್ರಗತಿ, ಬಾಕಿ ಉಳಿದಿರುವ ಕೆಲಸಗಳು ಹಾಗೂ ಎದುರಾಗಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಹುದಿನಗಳಿಂದ ನಡೆಸುತ್ತಿರುವ ಧರಣಿಯನ್ನು ಮುಕ್ತಾಯಗೊಳಿಸುವಂತೆ ಸಚಿವರು ರೈತರಿಗೆ ಮನವಿ ಮಾಡಿದರು. ತಹಸೀಲ್ದಾರ್ ಅನೀಲ ಬಡಿಗೇರ ಹಾಗೂ ಕಂದಾಯ ನಿರೀಕ್ಷಕರು ಉಪಸ್ಥಿತರಿದ್ದರು.
ಚಿಕ್ಕಲಕಿ-ಬಿಜಿಕೆ-23
ಚಿಕ್ಕಲಕಿ ಏತ ನೀರಾವರಿ ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಚಿಕ್ಕಲಕಿಕ್ರಾಸ್ ನಲ್ಲಿರೈತರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಜಿಲ್ಲಾಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಭೇಟಿ ನೀಡಿದರು.