ಬೈಂದೂರು : ಇಲ್ಲಿನ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿನೂತನವಾಗಿ ಪ್ರವೇಶ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಫ್ರೆಶರ್ಸ್ ಡೇ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿನಡೆಯಿತು.
ಕಾಲೇಜಿನ ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳು ಜಂಟಿಯಾಗಿ ಈ ಕಾರ್ಯಕ್ರಮ ಆಯೋಜಿಸಿದ್ದರು.ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಡಾ. ಉಮೇಶ್ ಮಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿ ಜೀವನವು ಅತ್ಯಂತ ಮಹತ್ವದ ಘಟ್ಟವಾಗಿದ್ದು, ಶಿಸ್ತು, ನಿರಂತರ ಪರಿಶ್ರಮ ಮತ್ತು ಸೃಜನಶೀಲತೆಯನ್ನು ಮೈಗೂಡಿಸಿಕೊಂಡು ಕಾಲೇಜಿನ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸಭಾ ಕಾರ್ಯಕ್ರಮದ ಬಳಿಕ ಹಿರಿಯ ವಿದ್ಯಾರ್ಥಿಗಳಿಂದ ಹೊಸಬರನ್ನು ಸ್ವಾಗತಿಸುವ ನಾನಾ ಮನರಂಜನಾ ಆಟಗಳು, ನೃತ್ಯ ಮತ್ತು ಸಂಗೀತ ಕಾರ್ಯಕ್ರಮ ನಡೆಯಿತು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಂಭ್ರಮಿಸಿದರು. ಹಿರಿಯ ವಿದ್ಯಾರ್ಥಿಗಳು ಕಿರಿಯರನ್ನು ಬರಮಾಡಿಕೊಳ್ಳುವ ಮೂಲಕ ಕಾಲೇಜು ಆವರಣದಲ್ಲಿಸೌಹಾರ್ದತೆಯ ವಾತಾವರಣ ಸಥಷ್ಟಿಯಾಯಿತು. ವಿದ್ಯಾರ್ಥಿನಿಯರಾದ ಭಾಗ್ಯಲಕ್ಷ್ಮಿ, ಸ್ಮಿತಾ ಹಾಗೂ ಅನುಷಾ ಕಾರ್ಯಕ್ರಮ ನಿರೂಪಿಸಿದರು.