ವಿಕ ಸುದ್ದಿಲೋಕ ಹುಬ್ಬಳ್ಳಿರಾಯಚೂರು ಜಿಲ್ಲೆಸಿರವಾರ ತಾಲೂಕು ಹೊಕ್ರಾಣಿ ಗ್ರಾಮದಲ್ಲಿದಲಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆ ಮಾಡಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ವಿಮೋಚನಾ ಸಂಘಟನೆ ಕಾರ್ಯಕರ್ತರು ನಗರದಲ್ಲಿಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಡಾ.ಅಂಬೇಡ್ಕರ್ ಸರ್ಕಲ್ ನಿಂದ ತಹಸೀಲ್ದಾರ್ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಕರ್ನಾಟಕದಲ್ಲಿನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ಮುಂದುವರಿದಿವೆ. ಇತ್ತೀಚೆಗೆ ರಾಯಚೂರು ಜಿಲ್ಲೆದೇವದುರ್ಗ ತಾಲೂಕು ಸಂಕೇಶ್ವರಾಳದಲ್ಲಿಯುವಕನ ಕೊಲೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆಚನ್ನಗಿರಿ ತಾಲೂಕು ಗೆಳಲಗೆರೆ ಗ್ರಾಮದಲ್ಲಿದೇವಸ್ಥಾನ ಮಾಡಿದ್ದಾರೆಂದು 5 ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆಮಾಡಲಾಗಿದೆ. ರಾಯಚೂರು ಜಿಲ್ಲೆಲಿಂಗಸೂರ ಕರಡಕಲ್ಲಗ್ರಾಮದಲ್ಲಿಮಹಿಳೆಯ ಸಾವು ಹೀಗೆ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇವೆ. ದಲಿತರಿಗೆ ರಕ್ಷಣೆ ಸಿಗುತ್ತಿಲ್ಲಎಂದು ಪ್ರತಿಭಟನಾಕಾರರು ದೂರಿದರು.
ಯಾವುದೇ ಜಿಲ್ಲೆಯಲ್ಲಿಅಸ್ಪೃಶ್ಯತೆ, ದೌರ್ಜನ್ಯ ನಡೆದರೆ ಆಯಾ ಜಿಲ್ಲಾಧಿಕಾರಿ, ಎಸ್ ಪಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಜರುಗಿಸುವುದಾಗಿ ಸರಕಾರ ಹೇಳಿತ್ತು. ಇಲ್ಲಿಯವರೆಗೆ ಯಾವುದೇ ಕ್ರಮವಾಗಿಲ್ಲಎಂದು ಆಕ್ಷೇಪಿಸಿದರು.
ಸಿರವಾರ ತಾಲೂಕು ಹೊಕ್ರಾಣಿ ಗ್ರಾಮದ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ತ್ವರಿತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಶ್ರೀಧರ ಕಂದಗಲ್ಲ, ಗುರು ಪಾಟೀ, ಕೆಂಚಪ್ಪ ಮಲ್ಲಮ್ಮನವರ, ಆಕಾಶ ಮಲವಳ್ಳಿ, ಸಿದ್ದಾರ್ಥ ಮಲ್ಲಮ್ಮನವರ, ಸುರೇಶ ಖಾನಾಪುರ, ವಿರುಪಾಕ್ಷ ಚಲವಾದಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಫೋಟೊ : ಸಂತೋಷ ಪ್ರೋಟೆಸ್ಟ್
ಹೊಕ್ರಾಣಿ ಗ್ರಾಮದಲ್ಲಿದಲಿತ ಯುವತಿ ಲೈಂಗಿಕ ದೌರ್ಜನ್ಯ, ಕೊಲೆ ಘಟನೆ ಖಂಡಿಸಿ ಕರ್ನಾಟಕ ದಲಿತ ವಿಮೋಚನಾ ಸಂಘಟನೆ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.