- 80 ಸಹಾಯಕ ಭವಿಷ್ಯ ನಿಧಿ ಆಯುಕ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನಕೇಂದ್ರ ಸರಕಾರದ ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿಖಾಲಿ ಇರುವ ಒಟ್ಟು 80 ಸಹಾಯಕ ಭವಿಷ್ಯ ನಿಧಿ ಆಯುಕ್ತರ (ಇಪಿಎಫ್ ಸಿ) ಹುದ್ದೆಗಳನ್ನು ಭರ್ತಿ ಮಾಡಲು ಯೂನಿಯನ್ ಪಬ್ಲಿಕ್ ಸವೀರ್ ಸ್ ಕಮಿಷನ್ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.11 ಕೊನೆಯ ದಿನವಾಗಿದೆ.
ಅರ್ಹ ಅಭ್ಯರ್ಥಿಗಳು ಯುಪಿಎಸ್ ಸಿ ಅಧಿಕೃತ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ನೇಮಕಾತಿ ಪರೀಕ್ಷೆಯು ಡಿಸೆಂಬರ್ 20ರಂದು ನಡೆಯಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಸಾಮಾನ್ಯ ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಎಸ್ ಸಿ/ಎಸ್ ಟಿ ಅಭ್ಯರ್ಥಿಗಳಿಗೆ 40 ವರ್ಷಗಳವರೆಗೆ ನಿಗದಿಪಡಿಸಲಾಗಿದೆ.
ಸರಕಾರದ ನಿಯಮಾನುಸಾರ ವಿಶೇಷಚೇತನ ಹಾಗೂ ಇತರೆ ಮೀಸಲಾತಿ ವರ್ಗದವರಿಗೆ ವಯೋಮಿತಿಯಲ್ಲಿಸಡಿಲಿಕೆ ನೀಡಲಾಗಿದೆ. ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ಮತ್ತು ಒಬಿಸಿ ಪುರುಷ ಅಭ್ಯರ್ಥಿಗಳು 25 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಮಹಿಳಾ, ಎಸ್ ಸಿ, ಎಸ್ ಟಿ ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳಿಗೆ ನೇಮಕಾತಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಂತಿಮ ಆಯ್ಕೆ ನಡೆಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಅನ್ವಯ ಲೆವೆಲ್ -10ರ ವೇತನ ಶ್ರೇಣಿಯಂತೆ ಆಕರ್ಷಕ ವೇತನ ದೊರೆಯಲಿದ್ದು, ಹುದ್ದೆಯು ಖಾಯಂ ಸ್ವರೂಪದ್ದಾಗಿರುತ್ತದೆ.
=======================
ಸಿಪಿಸಿಬಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಡಿಯಲ್ಲಿಬರುವ ‘ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ’ಯು ನಮಾಮಿ ಗಂಗೆ ಯೋಜನೆಯಡಿ ಗಂಗಾ ನದಿಯ ಪ್ರಾಜೆಕ್ಟ್ಗಾಗಿ ಒಟ್ಟು 51 ಗುತ್ತಿಗೆ ಆಧರಿತ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನವಾಗಿದೆ.
ನೇಮಕಾತಿಯಡಿ ಸೈಂಟಿಸ್ಟ್ -ಡಿ, ಸೈಂಟಿಸ್ಟ್ -ಸಿ, ಸೈಂಟಿಸ್ಟ್ -ಬಿ, ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್ ), ಅಡ್ಮಿನಿಸ್ಪ್ರೇಟಿವ್ ಅಸಿಸ್ಟೆಂಟ್ , ಸೈಂಟಫಿಕ್ ಅಸಿಸ್ಟೆಂಟ್ , ಟ್ಯಾಕ್ಸೋನಮಿಸ್ಟ್ , ಡೇಟಾ ಎಂಟ್ರಿ ಆಪರೇಟರ್ ಮತ್ತು ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಯಾ ಹುದ್ದೆಗಳಿಗೆ ತಕ್ಕಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ (ಎಂಎಸ್ಸಿ, ಬಿಇ, ಬಿ.ಟೆಕ್ ) ಸಿಎ, ಎಂಬಿಎ ಉತ್ತೀರ್ಣರಾಗಿರಬೇಕು ಮತ್ತು ನಿರ್ದಿಷ್ಟ ಅನುಭವ ಅಥವಾ ಗೇಟ್ ಅರ್ಹತೆ ಹೊಂದಿರಬೇಕು. ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಹುದ್ದೆಗಳ ಆಧಾರದ ಮೇಲೆ ಮಾಸಿಕ ಸಂಭಾವನೆಯು ರೂ. 38,741ರಿಂದ ರೂ. 1,71,597ರವರೆಗೆ ಇರಲಿದೆ. ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ, ನೇರವಾಗಿ ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ದಿಲ್ಲಿ, ಲಕ್ನೋ, ಕೋಲ್ಕೊತಾ ಅಥವಾ ಚಂಡೀಗಢದಲ್ಲಿರುವ ಕಚೇರಿಗಳಿಗೆ ನಿಯೋಜಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಧಿಕೃತ ವೆಬ್ ಸೈಟ್ ಡಿಡಿಡಿ.್ಚp್ಚಚಿ.ಜಟv.ಜ್ಞಿ ಗೆ ಭೇಟಿ ನೀಡಬಹುದು.