ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾವೇರಿ: ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ಆ.29ರಂದು ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿವಿಶೇಷವಾಗಿ ಆಯೋಜಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಖೇಲೇಗಾ ಭಾರತ್ , ಜೀತೇಗಾ ಭಾರತ್ ಎಂಬ ಧ್ಯೇಯವಾಕ್ಯದೊಂದಿಗೆ ಎರಡು ದಿನಗಳ ಕಾಲ ಸಾರ್ವಜನಿಕರಿಗಾಗಿ ಏಕ್ ಘಂಟಾ ಖೇಲ್ ಕೆ ಮೈದಾನ್ ಮೇನ್ ಕಾರ್ಯಕ್ರಮ ಹಮ್ಮಿಕೊಂಡ ಹಿನ್ನೆಲೆಯಲ್ಲಿನಗರದ ಹೊಸಮನಿ ಸಿದ್ಧಪ್ಪ ಜಿಲ್ಲಾಕ್ರೀಡಾಂಗಣದಲ್ಲಿವಿವಿಧ ಕ್ರೀಡಾ ಚಟುವಟಿಕೆ ಆಯೋಜಿಸಲಾಗುತ್ತಿದೆ.
ಆ.28ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾಕ್ರೀಡಾಂಗಣದಲ್ಲಿ5ಎ ಸೈಡ್ ಫುಟ್ಬಾಲ್ ಹಾಗೂ ಬಾಲಕಿಯರಿಗೆ ಹಾಕಿ ಪಂದ್ಯಾವಳಿ ನಡೆಯಲಿದೆ. ಆ.29ರಂದು ಸಂಜೆ 7 ಕ್ಕೆ ಜಿಲ್ಲಾಕ್ರೀಡಾಂಗಣದಲ್ಲಿಹಿರಿಯ ನಾಗರಿಕರಿಗಾಗಿ ವೇಗದ ನಡಿಗೆ ಸ್ಪರ್ಧೆ ಆಯೋಜಿಸಲಾಗಿದೆ. 50 ವರ್ಷ ಮೇಲ್ಪಟ್ಟ ಪುರುಷರು ಹಾಗೂ ಮಹಿಳೆಯರು ಈ ಸ್ಪರ್ಧೆಯಲ್ಲಿಭಾಗವಹಿಸಬಹುದು. ಪುರುಷರು ಹಾಗೂ ಮಹಿಳೆಯರಿಗೆ ತಲಾ 400 ಮೀಟರ್ ವೇಗದ ನಡಿಗೆ ಸ್ಪರ್ಧೆ ನಡೆಯಲಿದೆ.
16 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರಿಗೆ ಅಥ್ಲೆಟಿಕ್ಸ್ ನ 400 ಮೀಟರ್ ಹಾಗೂ 800 ಮೀಟರ್ ಓಟದ ಸ್ಪರ್ಧೆ ಆಯೋಜಿಸಲಾಗಿದೆ. ವಿವಿಧ ವಯೋಮಾನದ ಕ್ರೀಡಾಪಟುಗಳು ಮತ್ತು ಸಾರ್ವಜನಿಕರು ಭಾಗವಹಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.