ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾಘಟಕ, ರೋಟರಿ ಇಂಟರ್ ನ್ಯಾಶನಲ್ ಜಿಲ್ಲೆ3181, ದ.ಕ. ಜಿಲ್ಲಾಮಾಜಿ ಸೈನಿಕರ ಸಂಘ, ಮಂಥನ ಓಜಸ್ ಟ್ರಸ್ಟ್ ಮತ್ತು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿಧನ್ಯತಾ ಹಿರಿಯ ನಾಗರಿಕರ ದಿನಾಚರಣೆ ಆ.30ರಂದು ಬೆಳಗ್ಗೆ 9ಕ್ಕೆ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿನಡೆಯಲಿದೆ.ರೋಟರಿ ಜಿಲ್ಲೆ3181 ಗವರ್ನರ್ ಸತೀಶ್ ಬೋಳಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾಉಸ್ತುವಾರಿ ಸಚಿವ ಯು.ಟಿ.ಖಾದರ್ , ಸಂಸದ ಕ್ಯಾ.ಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ. ದ.ಕ. ಜಿಲ್ಲಾರೆಡ್ ಕ್ರಾಸ್ ಸೊಸೈಟಿ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಕರ್ನಲ್ ಎ.ಕೆ.ಜಯಚಂದ್ರನ್ , ಮಂಥನ ಓಜಸ್ ಟ್ರಸ್ಟ್ ನ ಅಧ್ಯಕ್ಷೆ ಮಂಗಳಾ ನಂದಕುಮಾರ್ , ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ., ರೋಟರಿ ಸಂಧ್ಯಾ ಸುರಕ್ಷಾ ಯೋಜನೆಯ ಚೇರ್ಮನ್ ಅನಿಲ್ ರಾವ್ ಉಪಸ್ಥಿತರಿರುವರು.
ಹಿರಿಯ ನಾಗರಿಕರಿಗಾಗಿ ಯೇನೆಪೊಯ ಆಯುರ್ವೇದ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿವೈದ್ಯಕೀಯ ಉಚಿತ ತಪಾಸಣೆ ಶಿಬಿರ ಹಾಗೂ ಶ್ರೀನಿವಾಸ್ ಇನ್ ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಸಹಯೋಗದಲ್ಲಿದಂತ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.