ಹಿರೇಕೋಗಲೂರು: ಕೃಷಿಯಲ್ಲಿಸಮಗ್ರತೆ ಅಳವಡಿಸಿಕೊಂಡಿರುವ ರೈತ ಹಾಗೂ ರೈತ ಮಹಿಳೆಯರಿಗೆ, ಶಿವಮೊಗ್ಗ ವಿವಿಯ ಕೃಷಿ ಮತ್ತು ತೋಟಗಾರಿಕೆ 2026ರಲ್ಲಿನಡೆಯಲಿರುವ ಮೇಳದಲ್ಲಿ2026-27ನೇ ಸಾಲಿನ ಜಿಲ್ಲಾಮಟ್ಟದ ಪ್ರಗತಿಪರ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಜಿಲ್ಲೆಗೆ ಒಬ್ಬರಂತೆ ಗುರುತಿಸಲಾಗುವುದು. ದಾವಣಗೆರೆ ಜಿಲ್ಲೆಯ ಪ್ರಗತಿಪರ ರೈತ ಹಾಗೂ ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಪ್ರಶಸ್ತಿ 7,500 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಒಳಗೊಂಡಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 5 ಕೊನೆಯ ದಿನವಾಗಿದೆ. ಆಸಕ್ತ ರೈತರು ಅರ್ಜಿ ಸಲ್ಲಿಸಲು ಕೋರಲಾಗಿದೆ ಎಂದು ಕತ್ತಲಗೆರೆ ಕೃಷಿ ಮತ್ತು ಸಂಶೋಧನಾ ಕೇಂದ್ರದ ಡಾ.ಗಂಗಪ್ಪಗೌಡ ಬಿರಾದರ ತಿಳಿಸಿದ್ದಾರೆ.-----