ಹುಣಸೂರಿನಲ್ಲಿಪ್ರಜಾಸೇವೆ ಅಭಿಯಾನ ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿಹಾಗೂ ಹುಣಸೂರು ಕ್ಷೇತ್ರದ ಶಾಸಕರ ಉಪಸ್ಥಿತಿಯಲ್ಲಿಪ್ರಜಾಸೇವಾ ಅಭಿಯಾನ ಕಾರ್ಯಕ್ರಮ ಸೆ.5ರಂದು ಬೆ.11 ಗಂಟೆಗೆ ಹುಣಸೂರು ಪಟ್ಟಣದ ಡಾ. ಬಿ.ಆರ್ . ಅಂಬೇಡ್ಕರ್ ಸಮುದಾಯ ಭವನದಲ್ಲಿಹಮ್ಮಿಕೊಳ್ಳಲಾಗಿದೆ. ಹುಣಸೂರು ತಾಲೂಕಿನ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳು ಹಾಗೂ ಕೋರಿಕೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಈ ಸಭೆಯಲ್ಲಿನೇರವಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸಲ್ಲಿಸಿ, ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ್ ರೆಡ್ಡಿ ತಿಳಿಸಿದ್ದಾರೆ. ಪ್ರವೇಶಕ್ಕೆ ಅರ್ಜಿ ಆಹ್ವಾನ ಮೈಸೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ. 30 ಕಡೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದು ಎಂದು ಎಂದು ಮೈಸೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.