ಬಂಟ್ವಾಳ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸಮಗ್ರ ದ್ವಿತೀಯ ಪ್ರಶಸ್ತಿ

Contributed bymambadynews@gmail.com|Vijaya Karnataka

ಮಂಗಳೂರಿನಲ್ಲಿ ನಡೆದ ಸುಭಾಶ್ಚಂದ್ರಭೋಸ್‌ ಜನ್ಮ ದಿನಾಚರಣೆ ಪ್ರಯುಕ್ತ ಕ್ರೀಡಾಕೂಟದಲ್ಲಿ ಬಂಟ್ವಾಳ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉತ್ತಮ ಸಾಧನೆ ಮಾಡಿದೆ. ಪಥಸಂಚಲದಲ್ಲಿ ಪ್ರಥಮ ಸ್ಥಾನ ಪಡೆದ ಸಂಘ, ಸಮಗ್ರವಾಗಿ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಅನೇಕ ಶಿಕ್ಷಕರು ವೈಯಕ್ತಿಕ ವಿಭಾಗದಲ್ಲೂ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಅಭಿನಂದನೆ ಸಲ್ಲಿಸಿದರು.

bantwal physical education teachers association wins overall second prize

ವಿಕ ಸುದ್ದಿಲೋಕ ಬಂಟ್ವಾಳ

ಇತ್ತೀಚೆಗೆ ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿನಡೆದ ಸುಭಾಶ್ಚಂದ್ರಭೋಸ್ ಜನ್ಮ ದಿನಾಚರಣೆ ಪ್ರಯುಕ್ತ ದ.ಕ. ಜಿಲ್ಲಾಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರಿಗೆ ನಡೆದ ಕ್ರೀಡಾಕೂಟದಲ್ಲಿಬಂಟ್ವಾಳ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಎಲ್ಲವಿಭಾಗದಲ್ಲಿಭಾಗವಹಿಸಿ ಪಥಸಂಚಲದಲ್ಲಿಪ್ರಥಮ ಸ್ಥಾನ ಪಡೆಯುದರೊಂದಿಗೆ ಸಮಗ್ರವಾಗಿ ದ್ವಿತೀಯ ಸ್ಥಾನವನ್ನು ಪಡೆಯಿತು.

ಅನೇಕ ದೈಹಿಕ ಶಿಕ್ಷಣ ಶಿಕ್ಷಕರು ವೈಯಕ್ತಿಕ ವಿಭಾಗದ ಪ್ರಶಸ್ತಿಗಳನ್ನು ಪಡೆದರು. ಅವರನ್ನು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಅಭಿನಂದಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್ , ತಾಲೂಕು ಸಮನ್ವಯಧಿಕಾರಿ ವಿದ್ಯಾ, ಶಿಕ್ಷಣ ಸಂಯೋಜಕರಾದ ರಮಾನಂದ ನೂಜಿಪಾಡಿ, ಸುಧಾ ಹಾಗೂ ಜಿಲ್ಲಾಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಪುಟ್ಟರಂಗನಾಥ, ತಾಲೂಕು ಗ್ರೇಡ್ ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ ರೈ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್ ಕಾವಳಪಡೂರು, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಜಗದೀಶ್ ರೈ ತುಂಬೆ ಉಪಸ್ಥಿತರಿದ್ದರು.

ಜಯರಾಮ್ ಕಾರ್ಯಕ್ರಮ ನಿರೂಪಿಸಿದರು, ಚಿನ್ನಪ್ಪ.ಕೆ ಜಾಲ್ಸೂರು ವಂದಿಸಿದರು.

ಚಿತ್ರ: 23ಬಿಎಚ್ ಪಿಇಟಿ

ದೈಹಿಕ ಶಿಕ್ಷಣ ಶಿಕ್ಷಕರ ಸಂಘಕ್ಕೆ ಪ್ರಶಸ್ತಿ ಲಭಿಸಿತು.