ಉನ್ನತ ಶಿಕ್ಷಣ ಸಚಿವರ ಪ್ರವಾಸ
ವಿಜಯನಗರ(ಹೊಸಪೇಟೆ): ಫೆ.24ರಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ವಿಶೇಷ ವಿಮಾನದ ಮೂಲಕ ಬಳ್ಳಾರಿಯ ಜಿಂದಾಲ್ ತೋರಣಗಲ್ಲುವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ರಸ್ತೆಯ ಮೂಲಕ ಹಂಪಿ ಕನ್ನಡ ವಿವಿಗೆ ಆಗಮಿಸಿ, ಸಂಜೆ 5 ಗಂಟೆಗೆ 34ನೇ ನುಡಿಹಬ್ಬ ಘಟಿಕೋತ್ಸವದಲ್ಲಿಭಾಗವಹಿಸಿ, ರಾತ್ರಿ 7.55 ಗಂಟೆಗೆ ಜಿಂದಾಲ್ ನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
26 ರಿಂದ ವಾಹನ ಸಂಚಾರ ಸಮೀಕ್ಷೆ
ವಿಜಯನಗರ(ಹೊಸಪೇಟೆ): ‘‘ಲೋಕೋಪಯೋಗಿ ಇಲಾಖೆಯಿಂದ ಫೆ.26 ರಿಂದ 28ರ ವರೆಗೆ ವಾಹನ ಸಂಚಾರ ಸಮೀಕ್ಷೆ ಕಾರ್ಯ ನಡೆಯಲಿದೆ,’’ ಎಂದು ಬಳ್ಳಾರಿ ಲೋಕೋಪಯೋಗಿ ಇಲಾಖೆ ಕಾರ್ಯ ನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
2026ನೇ ಸಾಲಿನ ರಸ್ತೆ ಸಂಚಾರ ಸಮೀಕ್ಷೆಯು ಪ್ರತಿದಿನ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ 3 ದಿನಗಳ ಕಾಲ ನಡೆಯಲಿದೆ. ರಸ್ತೆಗಳ ಮೇಲೆ ಕ್ಯಾಮೆರಾ ಸಮೇತ ಸಮೀಕ್ಷಾ ಕೇಂದ್ರ ಸ್ಥಾಪಿಸಲಾಗುತ್ತದೆ. ಸಮೀಕ್ಷಾ ಕೇಂದ್ರಗಳಿದ್ದಲ್ಲಿವಾಹನ ರಸ್ತೆ ಸಂಚಾರ ಸಮೀಕ್ಷೆ ಕೇಂದ್ರವಿದೆ, ತಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ ಎಂದು ಸೂಚನಾ ಫಲಕ ಅಳವಡಿಸಲಾಗಿರುತ್ತದೆ. ಈ ಸಮೀಕ್ಷೆಯಿಂದ ಸಂಗ್ರಹಿಸಿದ ಮಾಹಿತಿಯನ್ನು ಸರಕಾರಕ್ಕೆ ರವಾನಿಸಲಾಗುವುದು. ಇದರಿಂದ ಸರಕಾರ ರಸ್ತೆಗಳ ಸಂಚಾರ ತೀವ್ರತೆ ಅರಿತು ರಸ್ತೆಗಳ ಅಗಲ ಅಳತೆ ನಿರ್ಧರಿಸಲು, ರಸ್ತೆಗಳ ಮೇಲ್ದರ್ಜೆಗೇರಿಸಲು ಹಾಗೂ ರಸ್ತೆಗಳ ಸ್ಥಿತಿಗತಿ ಸುಧಾರಿಸಲು ಅನುಕೂಲವಾಗಲಿದೆ ಎಂದು ಪ್ರಕಟಣೆಯಲ್ಲಿತಿಳಿಸಿದ್ದಾರೆ.
ಪೋಟೊ:ಎಚ್ ಪಿಟಿ23ದೇವರಾಜ03:ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ .

