ತರಕಾರಿ ಬೀಜಗಳ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

Contributed bygururaja.jd@gmail.com|Vijaya Karnataka

ಶಿವಮೊಗ್ಗ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನಲ್ಲಿ ರೈತರಿಗೆ ತರಕಾರಿ ಬೀಜಗಳ ಕಿಟ್ ವಿತರಿಸಲು ಅರ್ಜಿ ಆಹ್ವಾನಿಸಿದೆ. ಫೆಬ್ರವರಿ 23 ರೊಳಗೆ ಅರ್ಜಿ ಸಲ್ಲಿಸಬೇಕು. ರೈತರು ಅಗತ್ಯ ದಾಖಲೆಗಳೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಹೋಬಳಿ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಇದು ರೈತರ ಆದಾಯ ಹೆಚ್ಚಿಸಲು ಸಹಕಾರಿಯಾಗಲಿದೆ.

vegetable seed kit distribution last application date is feb 23

ಶಿವಮೊಗ್ಗ: ತಾಲೂಕು ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ‘ತರಕಾರಿ ಬೀಜಗಳ ಕಿಟ್ ’ ಗಳನ್ನು ರೈತರಿಗೆ ವಿತರಿಸಲು ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಫೆ.23 ಕೊನೆಯ ದಿನವಾಗಿದೆ. ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಪ್ರಸ್ತುತ ವರ್ಷದ ಪಹಣಿ, ಆರ್ ಟಿಸಿ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ , ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.

ಆಸಕ್ತ ರೈತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಗಾಂಧಿಪಾರ್ಕ್, ಶಿವಮೊಗ್ಗ ಇವರನ್ನು ಅಥವಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಪಡೆದು ಸಲ್ಲಿಸಬಹುದು ಎಂದು ಶಿವಮೊಗ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.