ಇ-ಕೆವೈಸಿ ಮಾಡಿಸಲು ಸೂಚನೆ
ಬೆಂಗಳೂರು ಗ್ರಾಮಾಂತರ: ಫ್ರೂಟ್ಸ್ ತಂತ್ರಾಂಶದಲ್ಲಿರೈತರ ಇ-ಕೆವೈಸಿ ಮತ್ತು ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ ತೆಗೆದುಕೊಳ್ಳುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ ನೀಡಿದೆ.
ಕೇಂದ್ರ ಸರಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿ ಕೇಂದ್ರ ಸರಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರೈತರ ವಿವರಗಳನ್ನೊಳಗೊಂಡ ಸ್ಟೇಟ್ ಫಾರ್ಮರ್ ರಿಜಿಸ್ಟರ್ ಸ್ಥಾಪಿಸಲು ಯೋಜಿಸಲಾಗಿದೆ. ಮಾನದಂಡಗಳ ಪ್ರಕಾರ ಫ್ರೂಟ್ಸ್ ಹಾಗೂ ಭೂಮಿ ದತ್ತಾಂಶಗಳು ಅತಿ ಮುಖ್ಯವಾಗಿರುತ್ತದೆ. ಇದರೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿರೈತರ ಇ-ಕೆವೈಸಿ ಮತ್ತು ರೈತರ ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ ತೆಗೆದುಕೊಳ್ಳುವುದು ಕಡ್ಡಾಯ.
ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರಕಾರದಿಂದ ಒಂದು ಕೇಂದ್ರ ನೋಂದಾಯಿತ ರೈತರ ಸಂಖ್ಯೆಯನ್ನು ಸೃಜಿಸಲಾಗುತ್ತದೆ, ಈ ರೀತಿ ಸೃಜಿಸಲಾದ ಕೇಂದ್ರ ನೋಂದಾಯಿತ ರೈತ ಸಂಖ್ಯೆಯನ್ನು ಕೇಂದ್ರ ಸರಕಾರದಿಂದ ಅನುಷ್ಠಾನಗೊಳಿಸುವ ಪಿ.ಎಂ ಕಿಸಾನ್ ಸಮ್ಮಾನ ಯೋಜನೆಯು ಸೇರಿದಂತೆ ಎಲ್ಲಾಯೋಜನೆಗಳಲ್ಲೂಕಡ್ಡಾಯವಾಗಿ ಬಳಸಲಾಗುತ್ತದೆ. ಕೇಂದ್ರ ಸರಕಾರದ ಪ್ರಮುಖ ಯೋಜನೆಗಳಾದ ಬರಪರಿಹಾರ, ಬೆಳೆ ವಿಮೆ, ಪಿ.ಎಂ ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಕೇಂದ್ರ ನೋಂದಾಯಿತ ರೈತರ ಸಂಖ್ಯೆಯು ಕಡ್ಡಾಯವಾಗಿರುತ್ತದೆ. ಆದ್ದರಿಂದ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ , ಗ್ರಾಮ ಒನ್ ಕೇಂದ್ರ , ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಕಚೇರಿಗಳನ್ನು ಆಧಾರ್ ಕಾರ್ಡ್ ನೊಂದಿಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಹಾಗೂ ತಮ್ಮ ಹೆಸರಿನಲ್ಲಿರುವ ಎಲ್ಲಾಪಹಣಿಗಳನ್ನು ಫೆ. 26ರೊಳಗಾಗಿ ಕಡ್ಡಾಯವಾಗಿ ಸಂಪರ್ಕಿಸಿ ಇ-ಕೆವೈಸಿ ಮಾಡಿಸಬೇಕು. ರೈತರ ವಿದ್ಯುನ್ಮಾನ ಸಹಮತಿ ಪತ್ರ ನೀಡುವುದು. ಎಲ್ಲಾಭೂ ಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ ಎಫ್ ಐಡಿಯಲ್ಲಿಸೇರ್ಪಡೆಗೊಳಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

