ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ವಿಕ ಸುದ್ದಿಲೋಕ ಬೆಂಗಳೂರು ಗ್ರಾಮಾಂತರ
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಆರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಮಾರ್ಚ್ 5 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770004 ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ದೂರವಾಣಿ ಸಂಖ್ಯೆ. 080-22449999 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಅಧಿಕಾರಿಗಳು ಪ್ರಕಟಣೆ ತಿಳಿಸಿದೆ.

