*ಚೂರುಪಾರು

Contributed bygvittalslb@gmail.com|Vijaya Karnataka

Applications for fee reimbursement for backward class and nomadic students for the 2025-26 academic year are now due March 5. This extension is based on requests from parents, students, and institutions. Eligible students are encouraged to utilize this opportunity. Details on the program, eligibility, and required documents are available online.

extension of fee reimbursement deadline till march 5 for backward class students free yuva nidhi plus skill training in koppal

ಅವಧಿ ವಿಸ್ತರಣೆ

ಕೊಪ್ಪಳ: ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅಲೆಮಾರಿ ವಿದ್ಯಾರ್ಥಿಗಳಿಂದ 2025-26 ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಪೋಷಕರು, ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮನವಿಯ ಮೇರೆಗೆ ಮಾರ್ಚ್ 5 ರವರೆಗೆ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ.

kಣಣಠಿ*://**ಠಿ.ಠಿs*ಣpಚಿಣಡಿåಛಿ.ಞಚಿಡಿಟಿಚಿಣಚಿಞಚಿ.Ãsñ.åಟಿ ಮೂಲಕ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ kಣಣಠಿ*://dಛಿತಿಜ.ಞಚಿಡಿಟಿಚಿಣಚಿಞಚಿ.Ãsñ.åಟಿ ಗೆ ಭೇಟಿ ನೀಡಬೇಕು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ, ದೂರವಾಣಿ ಸಂಖ್ಯೆ: 8050770004, ಇ-ಮೇಲ್ : dಛಿತಿಜkhಟಠಿಟåಟಿh*Ãpಚಿåಟ.ಛಿsp ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ : ಠಿs*ಣpಚಿಣಡಿåಛಿkhಟಠಿ*ಞಚಿಡಿಟಿಚಿಣಚಿಞಚಿ.Ãsñ.åಟಿ ದೂರವಾಣಿ ಸಂಖ್ಯೆ: 1902ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಅಧಿಕಾರಿಗಳು ಪ್ರಕಟಣೆಯಲ್ಲಿತಿಳಿಸಿದ್ದಾರೆ.

---

ಕೌಶಲ ತರಬೇತಿ ಕಾರ್ಯಾಗಾರ

ಕೊಪ್ಪಳ: ಜಿಲ್ಲಾಡಳಿತ, ಜಿಲ್ಲಾಪಂಚಾತಿತಿ, ಜಿಲ್ಲಾಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮತ್ತು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕೊಪ್ಪಳ ಸಂಯುಕ್ತಾಶ್ರಯದಲ್ಲಿಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಯುವನಿಧಿ ಪ್ಲಸ್ ಅಡಿ ಉಚಿತವಾಗಿ ಕೌಶಲ ತರಬೇತಿ ನೀಡಲು ಫೆ.26 ರಂದು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ನಗರದ ಅಶೋಕ ವೃತ್ತ ಹತ್ತಿರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದ ಸರಕಾರಿ

ಪ್ರಥಮದರ್ಜೆ ಕಾಲೇಜಿನಲ್ಲಿಕಾರ್ಯಾಗಾರ ನಡೆಯಲಿದ್ದು, ಜಿಲ್ಲೆಯ ಎಲ್ಲಯುವನಿಧಿ ಫಲಾನುಭವಿಗಳು ಕಡ್ಡಾಯವಾಗಿ ಹಾಜರಾಗಿ ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಕೌಶಲಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.