ಜೀವನ ಶೈಲಿಯಲ್ಲಿಬದಲಾವಣೆ ಅಗತ್ಯ
ಉಚಿತ ನೇತ್ರ ತಪಾಸಣೆ ಶಿಬಿರ | ಹಿರಿಯ ಸಿವಿಲ್ ನ್ಯಾಯಾಧೀಶಅರುಣ್ ಕುಮಾರ್ ಅಭಿಮತ
ವಿಕ ಸುದ್ದಿಲೋಕ ಹೊಸಕೋಟೆ
ಜೀವನ ಶೈಲಿ ಬದಲಾವಣೆಯಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗಲಿದೆ ಎಂದು ಹೊಸಕೋಟೆ ಜೆಎಂಎಫ್ ಸಿ ನ್ಯಾಯಾಲಯ ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ಜಿ. ಅಭಿಪ್ರಾಯಪಟ್ಟರು.
ಹೊಸಕೋಟೆ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿಕರ್ನಾಟಕ ಮಾನವ ಹಕ್ಕುಗಳ ಜಾಗೃತಿ ಸಮಿತಿ, ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿಹಮ್ಮಿಕೊಂಡಿದ್ದ ಉಚಿತ ನೇತ್ರ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಒತ್ತಡದ ಜೀವನ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಲಿದೆ ಎಂದರು.
ಪ್ರಸ್ತುತ ಕಾಲಘಟ್ಟದಲ್ಲಿಹದಿಹರೆಯದ ಯುವಕ ಯುವತಿಯರಲ್ಲಿಕಣ್ಣಿನ ಸಮಸ್ಯೆಗಳು ಉಲ್ಬಣವಾಗುತ್ತಿದೆ. ಮುಖ್ಯವಾಗಿ ಮೊಬೈಲ್ ಬಳಕೆ, ಟಿವಿ ವೀಕ್ಷಣೆ ಒಂದೆಡೆಯಾದರೆ, ನಾವು ಸೇವಿಸುವ ಆಹಾರ ಪದ್ಧತಿಯಿಂದಲೂ ಕಣ್ಣಿನ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಮನುಷ್ಯನ ದೇಹದಲ್ಲಿಕಣ್ಣು ಅತ್ಯಮೂಲ್ಯ ಅಂಗವಾಗಿದ್ದು , ಇದರ ರಕ್ಷಣೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದರು.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಬಿ.ಟಿ.ವಿಶ್ವನಾಥ ಮಾತನಾಡಿ, ನಮ್ಮ ಸಂಘಟನೆ ಹಲವಾರು ಸಾಮಾಜಿಕ ಕಾರ್ಯಗಳ ಜತೆಗೆ ನೇತ್ರ ತಪಾಸಣೆ, ರಕ್ತದಾನ ಶಿಬಿರಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ ಎಂದು ಹೇಳಿದರು.
ಶಿಬಿರದಲ್ಲಿ 1150ಕ್ಕೂ ಹೆಚ್ಚು ಜನರು ನೇತ್ರ ತಪಾಸಣೆಗೆ ಒಳಗಾಗಿದ್ದು, ಇದರಲ್ಲಿ442 ಮಂದಿಗೆ ಕನ್ನಡಕ ಆಳವಡಿಸಲು ವೈದ್ಯರು ಸೂಚಿಸಿದ್ದಾರೆ. ಈ ಕನ್ನಡಕಗಳನ್ನು ಉಚಿತವಾಗಿ ನೀಡಲಾಗುವುದು. 162 ಜನರು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಸುಮಾರು ಎರಡು ದಶಕಗಳಿಂದ ಸಾವಿರಾರು ನೇತ್ರ ತಪಾಸಣೆ ಶಿಬಿರಗಳನ್ನು ಆಯೋಚಿಸಿದ್ದು, ಒಂದು ಲಕ್ಷಕ್ಕೂ ಅಧಿಕ ಜನರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಜಾಗೃತಿ ಸಮಿತಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಂಜುಳಾ, ಕಲಾವಿದ ಶಿವಕುಮಾರ ಆರಾಧ್ಯ, ಮೇದಶ್ರೀ ಶಾಲೆ ಪ್ರಾಂಶುಪಾಲ ಅಶ್ವತ್ ನಾರಾಯಣ್ , ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಅಂಬು ಸೇಲ್ವಂ, ವೈದ್ಯಾಧಿಕಾರಿಗಳಾದ ಡಾ.ರಾಘವೇಂದ್ರ, ಡಾ.ಮಂಜುನಾಥ್ , ಸಮಾಜ ಸೇವಕರಾದ ರಾಧಾಗೋವಿಂದ್ , ರವಿ, ರತ್ನಮ್ಮ, ವರಲಕ್ಷ್ಮಿ ಮತ್ತಿತರರು ಹಾಜರಿದ್ದರು.
ಚಿತ್ರ-23 ಸೂಲಿಬೆಲೆ 5
ಹೊಸಕೋಟೆ ನಗರದಲ್ಲಿಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಜಾಗೃತಿ ಸಮಿತಿ ವತಿಯಿಂದ ನಡೆದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ಉದ್ಘಾಟಿಸಿದರು.
ಚಿತ್ರ-23 ಸೂಲಿಬೆಲೆ 6
ಹೊಸಕೋಟೆಯಲ್ಲಿನಗರದಲ್ಲಿಮಾನವ ಹಕ್ಕುಗಳ ಜಾಗೃತಿ ಸಮಿತಿಯಿಂದ ನಡೆದ ಉಚಿತ ನೇತ್ರ ತಪಾಸಣೆ ಶಿಬಿರದಲ್ಲಿಜನರು ಕಣ್ಣಿನ ತಪಾಸಣೆ ಮಾಡಿಸಿಕೊಂಡರು.

