ಹೊಸದಿಲ್ಲಿ: ಜವಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ ಯು) ಆಚರಣದಲ್ಲಿಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಭಾನುವಾರ (ಫೆ.22) ರಾತ್ರಿ ಎಡ ಮತ್ತು ಬಲಪಂಥೀಯ ವಿದ್ಯಾರ್ಥಿಗಳ ನಡುವೆ ಸಂಘರ್ಷ ಏರ್ಪಟ್ಟಿದ್ದು, ಕಲ್ಲುತೂರಾಟದಿಂದಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ 1:30ರ ಸುಮಾರಿಗೆ ಘಟನೆ ನಡೆದಿದೆ. ಉಪಕುಲಪತಿ ಶಾಂತಿಶ್ರೀ ಧುಲಿಪುಡಿ ಪಂಡಿತ್ ಅವರ ರಾಜೀನಾಮೆ ಮತ್ತು ಕುಲಾಂತರಿ ಆದೇಶವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕ್ಯಾಂಪಸ್ ನ ಈಸ್ಟ್ ಗೇಟ್ನಲ್ಲಿಸಮಾನತೆ ಮೆರವಣಿಗೆಗೆ ಕರೆ ನೀಡಲಾಗಿತ್ತು. ಈ ಮೆರವಣಿಗೆಯಲ್ಲಿವಿಶ್ವವಿದ್ಯಾಲಯದ ಆಡಳಿತ ಮಂಡಳಿ ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳನ್ನು ಕಳುಹಿಸಿ ತಮ್ಮನ್ನು ಎದುರಿಸಲು ಅವಕಾಶ ಮಾಡಿಕೊಟ್ಟಿತು ಎಂದು ಎಡಪಂಥೀಯ ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಎಬಿವಿಪಿ ಈ ಆರೋಪವನ್ನು ತಳ್ಳಿ ಹಾಕಿದ್ದು, ಎಡಪಂಥೀಯ ಸಂಘಟನೆಗಳು ಹಿಂಸೆಗೆ ಪ್ರಚೋದನೆ ನೀಡಿ, ಘಟನೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿವೆ ಎಂದು ಪ್ರತಿ ಆರೋಪಿಸಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಬೂದಿ ಮುಚ್ಚಿದ ಕೆಂಡದಂತಿದೆ. ಯಾವುದೇ ಸಮಯದಲ್ಲಿಮತ್ತೆ ಗಲಭೆಯಾಗುವ ಸಾಧ್ಯತೆಗಳಿವೆ.

