ಸಹಾಯಧನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್ ಸಿಎಸ್ ಪಿ, ಟಿಎಸ್ ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯನ್ನು ವಸತಿ ಸಹಿತಿ ರಾಜ್ಯ ಹಾಗೂ ಕೇಂದ್ರ ಸರಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ.
ಅರ್ಜಿದಾರ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ವಯಸ್ಸು 20 ರಿಂದ 55 ವರ್ಷದೊಳಗಿರಬೇಕು. 10ನೇ ತರಗತಿಯಲ್ಲಿಉತ್ತೀರ್ಣನಾಗಿರಬೇಕು. ನಗರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ 2 ಲಕ್ಷ ರೂ. ಮೀರಬಾರದು. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ 1.50 ಲಕ್ಷ ರೂ. ಮೀರಬಾರದು. ಅರ್ಜಿದಾರನು ಯಾವ ಜಿಲ್ಲೆಯ ನಿವಾಸಿಯಾಗಿರುತ್ತಾರೋ ಅದೇ ಜಿಲ್ಲೆಯಲ್ಲಿಅರ್ಜಿ ಸಲ್ಲಿಸಬೇಕು. ಆಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸುವುದು ಕಡ್ಡಾಯ.
ಅರ್ಜಿದಾರನು ಎಲ್ಲಾದಾಖಲೆಗಳನ್ನು ಸ್ವಯಂ ದೃಢೀಕರಿಸಿ ಮುಚ್ಚಿದ ಲಕೋಟೆಯಲ್ಲಿದ್ವಿಪ್ರತಿಯಲ್ಲಿಸಲ್ಲಿಸಬೇಕು. ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 2026 ರ ಮಾ.13ರರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇಲ್ಲಿಕಚೇರಿ ಸಮಯದಲ್ಲಿಅರ್ಜಿ ಸಲ್ಲಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

