ದಕ್ಷಿಣ ಕನ್ನಡ ಮಹಿಳಾ ಕಾಂಗ್ರೆಸ್ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ

Contributed byganeshaprasadapandelu@gmail.com|Vijaya Karnataka

K.A. Asma Hasainar and Savita Barkala Kolnadu have been appointed as new General Secretaries for Dakshina Kannada Mahila Congress (Rural). This move aims to further strengthen the organization. The appointments were made following directives from District Congress Committee President Harish Kumar and guidance from national and state Mahila Congress presidents.

new general secretaries appointed for dakshina kannada district mahila congress rural unit

ವಿಕ ಸುದ್ದಿಲೋಕ ವಿಟ್ಲ

ದಕ್ಷಿಣ ಕನ್ನಡ ಜಿಲ್ಲಾಮಹಿಳಾ ಕಾಂಗ್ರೆಸ್ (ಗ್ರಾಮಾಂತರ) ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೆ.ಎ. ಅಸ್ಮಾ ಹಸೈನಾರ್ ಹಾಗೂ ಸವಿತಾ ಬರ್ಕಳ ಕೊಳ್ನಾಡು ಅವರನ್ನು ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿಆದೇಶ ಪತ್ರ ನೀಡಲಾಯಿತು.

ಕೊಳ್ನಾಡು ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಹಾಗೂ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿರುವ ಕೆ.ಎ. ಅಸ್ಮಾ ಅವರು ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರ ಗಳಲ್ಲಿಸಕ್ರಿಯವಾಗಿ ತೊಡಗಿಸಿಕೊಂದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಹಲವು ಸಂಘಟನೆಗಳಲ್ಲಿಸಕ್ರಿಯವಾಗಿ ತೊಡಗಿಸಿಕೊಂಡಿರುವ ಸವಿತಾ ಬರ್ಕಳ ಕೊಳ್ನಾಡು ಅವರು ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿಗುರುತಿಸಿಕೊಂಡಿದ್ದಾರೆ.

ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಮಾರ್ಗದರ್ಶನದಲ್ಲಿ, ಜಿಲ್ಲಾಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ನಿರ್ದೇಶದ ಮೇರೆಗೆ ಈ ನೇಮಕಾತಿ ಮಾಡಲಾಗಿದೆ.