(ಸಿದ್ಧಲಿಂಗ ಸ್ವಾಮೀಜಿಗಳಿಂದ ಸಿದ್ಧಗಂಗಾ ಕಪ್ ಅನಾವರಣ)
ವಿಕ ಸುದ್ದಿಲೋಕ ತುಮಕೂರು
ಕಬಡ್ಡಿ ನಮ್ಮ ದೇಶದ ಗ್ರಾಮೀಣ ಕ್ರೀಡೆ . ಈ ಕ್ರೀಡೆಯನ್ನು ಪ್ರೋತ್ಸಾಹಿಸಬೇಕು ಎನ್ನುವ ಕಾರಣಕ್ಕೆ ಪ್ರತಿ ವರ್ಷ ಜಾತ್ರೆ ಸಂದರ್ಭದಲ್ಲಿಕಬಡ್ಡಿ ಪಂದ್ಯಾವಳಿ ಆಯೋಜಿಸಿಲು ಸಿದ್ಧಗಂಗಾ ಸ್ಪೋರ್ಟ್ಸ್ ಅಸೋಸಿಯೇಷನ್ ನವರು ಮುಂದೆ ಬಂದಿದ್ದಾರೆ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.
ನಗರದ ಸಿದ್ಧಗಂಗಾ ಮಠದಲ್ಲಿನಡೆಯುತ್ತಿರುವ ಸಿದ್ಧಲಿಂಗೇಶ್ವರ ಜಾತ್ರೆ ಸಂದರ್ಭದಲ್ಲಿಜಿಲ್ಲಾಅಮೆಚೂರ್ ಕಬಡ್ಡಿ ಸಂಸ್ಥೆ ಸಹಕಾರದಲ್ಲಿನಗರದ ಸಿದ್ಧಗಂಗಾ ಸ್ಪೋರ್ಟ್ಸ್ ಅಸೋಸಿಯೇಷನ್ ನಿಂದ ಮಠದಲ್ಲಿಫೆ.13ರಿಂದ 3 ದಿನಗಳ ಕಾಲ ರಾಜ್ಯ ಮಟ್ಟದ ಹೊನಲು ಬೆಳಕಿನ ಸಿದ್ಧಗಂಗಾ ಕಪ್ ಕಬಡ್ಡಿ ಪಂದ್ಯಾವಳಿಯ ಸಿದ್ಧಗಂಗಾ ಕಪ್ ಗಳನ್ನು ಅನಾವರಣಗೊಳಿಸಿ ಶ್ರೀಗಳು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿಅನೇಕ ಕಬಡ್ಡಿ ಆಟಗಾರರಿದ್ದಾರೆ. ಇಂತಹ ಪಂದ್ಯಾವಳಿಗಳನ್ನು ಆಯೋಜಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ವಿಶೇಷವಾಗಿ ಈಗಿನ ಮಕ್ಕಳು ಯಾವುದಾದರೂ ಒಂದು ಕ್ರೀಡೆಯಲ್ಲಿತೊಡಗಿಸಿಕೊಳ್ಳಬೇಕು. ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿಯಾಗಿದೆ ಎಂದರು.
ಶ್ರೀ ಸಿದ್ಧಗಂಗಾ ಸ್ಪೋರ್ಟ್ಸ್ ಅಸೋಸಿಯೇಷನ್ ಗೌರವಾಧ್ಯಕ್ಷ ಎಚ್ .ಎನ್ .ದೀಪಕ್ ಮಾತನಾಡಿ, ಫೆ.13ರಂದು ಸಂಜೆ 6 ಗಂಟೆಗೆ ಶ್ರೀಮಠದ ಸಿದ್ಧಲಿಂಗ ಸ್ವಾಮೀಜಿ, ಶಿವಸಿದ್ಧೇಶ್ವರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆಯಲ್ಲಿಅರವಿಂದ್ ಪ್ರಾಪರ್ಟೀಸ್ ಮಾಲೀಕ ಅಶೋಕ್ ಅವರು ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ರಾಜ್ಯ ಮಟ್ಟದ ಈ ಹೊನಲು ಬೆಳಕಿನ ಕಬಡ್ಡಿ ಟೂರ್ನಿಗೆ ಸಿದ್ಧಗಂಗಾ ಮಠದ ಆವರಣದಲ್ಲಿಅಂತಾರಾಷ್ಟ್ರೀಯ ಗುಣಮಟ್ಟದ ಅಂಕಣ ಸಿದ್ಧಪಡಿಸಲಾಗುತ್ತದೆ. ರಾಜ್ಯದ ಬಲಿಷ್ಠ ಪುರುಷರ 24 ಹಾಗೂ ಮಹಿಳೆಯರ 4 ತಂಡಗಳು ಈ ಪಂದ್ಯಾವಳಿಯಲ್ಲಿಭಾಗವಹಿಸಲಿವೆ ಎಂದು ಹೇಳಿದರು.
ಜಿಲ್ಲಾಅಮೆಚೂರ್ ಕಬಡ್ಡಿ ಸಂಸ್ಥೆ ಅಧ್ಯಕ್ಷ ಕೆ.ಆರ್ .ರವೀಂದ್ರ ಮಾತನಾಡಿ, ಭಾರತ ಕಬಡ್ಡಿ ತಂಡದ ತರಬೇತುದಾರರಾದ ಬಿ.ಸಿ.ರಮೇಶ್ , ಸುರೇಶ್ ಸೇರಿದಂತೆ 6 ಜನರಿಗೆ ಸಿದ್ಧಗಂಗಾ ಕ್ರೀಡಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪಂದ್ಯಾವಳಿ ವೀಕ್ಷಣೆಗೆ ಸುಸಜ್ಜಿತ ಗ್ಯಾಲರಿ ನಿರ್ಮಾಣ ಮಾಡಲಾಗುವುದು. ವಿಜೇತ ತಂಡಕ್ಕೆ 2 ಲಕ್ಷ ರೂ. ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ ಮತ್ತು ವಿವಿಧ ವಿಭಾಗಗಳಲ್ಲಿಶ್ರೇಷ್ಟ ಆಟಗಾರರಿಗೆ ಬಹುಮಾನ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿಜಿಲ್ಲಾಅಮೆಚೂರ್ ಕಬಡ್ಡಿ ಸಂಸ್ಥೆ ಜಂಟಿ ಕಾರ್ಯದರ್ಶಿ ಮುನಿರಾಜು, ನಿರ್ದೇಶಕ ರಮೇಶ್ , ಕನ್ನಡಪರ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಶಂಕರ್ , ವಿಜಯಸೇನೆ ರಾಜ್ಯ ಕಾರ್ಯದರ್ಶಿ ರಂಜನ್ , ಸಿದ್ಧಗಂಗಾ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಆರ್ .ಎಸ್ .ವಿರೂಪಾಕ್ಷಯ್ಯ, ಉಪಾಧ್ಯಕ್ಷ ಕೆ.ಆರ್ .ಸತೀಶ್ , ಆರ್ .ಗುರುಪ್ರಸಾದ್ , ಆರ್ .ಎಸ್ .ಸೋಮಶೇಖರ್ , ಬಿ.ಸಿ.ಮಲ್ಲಿಕಾರ್ಜುನ್ , ಆರ್ .ಎಚ್ .ಶಿವಕುಮಾರ್ , ಎಚ್ .ಜಿ.ಮಂಜುನಾಥ್ , ಪ್ರಧಾನ ಕಾರ್ಯದರ್ಶಿ ಎಂ.ಪಿ.ಉಮಾಶಂಕರ್ , ಕಾರ್ಯದರ್ಶಿ ಆರ್ .ಎಂ.ಸಿದ್ಧರಾಜು, ಖಜಾಂಚಿ ಎ.ಜಿ.ಹರೀಶ್ ಹಾಜರಿದ್ದರು.
ಫೋಟೋ 9ಕೆಜಿಎಚ್ 2: ತುಮಕೂರು ನಗರದ ಸಿದ್ಧಗಂಗಾ ಮಠದಲ್ಲಿನಡೆಯುತ್ತಿರುವ ಸಿದ್ಧಲಿಂಗೇಶ್ವರ ಜಾತ್ರೆಯಂದು ಜಿಲ್ಲಾಅಮೆಚೂರ್ ಕಬಡ್ಡಿ ಸಂಸ್ಥೆ ಸಹಕಾರದಲ್ಲಿನಡೆಯಲಿರುವ ಸಿದ್ಧಗಂಗಾ ಸ್ಪೋರ್ಟ್ಸ್ ಅಸೋಸಿಯೇಷನ್ ಕಪ್ ಗಳನ್ನು ಸಿದ್ಧಗಂಗಾ ಶ್ರೀಗಳು ಅನಾವರಣಗೊಳಿಸಿದರು.

