ವಿಕ ಸುದ್ದಿಲೋಕ ಮಂಡ್ಯ
ಮಂಡ್ಯ ತಾಲೂಕಿನ ಬೇವುಕಲ್ಲುಗ್ರಾಮದ ಬೀರೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುವ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಕುಮಾರ ಸ್ಥಳಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.
ನಂತರ ಅಧಿಕಾರಿಗಳ ಜತೆ ಮಾತನಾಡಿ, ‘‘ಕಾನೂನು ಸುವ್ಯವಸ್ಥೆ ಕಾಪಾಡುವಿಕೆ, ಸುಗಮ ಸಂಚಾರ ವ್ಯವಸ್ಥೆ, ಸಾರ್ವಜನಿಕರ ಸುರಕ್ಷತೆ, ಸ್ವಚ್ಛತೆ ಹಾಗೂ ಸೌಲಭ್ಯಗಳ ಸಮರ್ಪಕ ನಿರ್ವಹಣೆ ಕುರಿತು ವಿಶೇಷÜ ಗಮನ ಹರಿಸಬೇಕು. ದೇವಸ್ಥಾನ ಆವರಣ ಮತ್ತು ಸುತ್ತಮುತ್ತಲು ಅಡಚಣೆಯಾಗದಂತೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಬೇಕು. ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಹಾಗೂ ತುರ್ತು ಪರಿಸ್ಥಿತಿಗೆ ವೈದ್ಯಕೀಯ ಮತ್ತು ಅಗ್ನಿಶಾಮಕ ಸೇವೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು,’’ ಎಂದು ನಿರ್ದೇಶಿಸಿದರು.
ಎಸ್ಪಿ ಡಾ.ವಿ.ಜೆ.ಶೋಭಾರಾಣಿ, ಎಎಸ್ಪಿಗಳಾದ ಸಿ.ಇ.ತಿಮ್ಮಯ್ಯ, ಎಸ್ .ಇ.ಗಂಗಾಧರಸ್ವಾಮಿ, ತಹಸೀಲ್ದಾರ್ ವಿಶ್ವನಾಥ್ , ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷ ಎ.ಸಿ.ರಮೇಶ್ ಹಾಗೂ ನಾನಾ ಇಲಾಖೆಗಳ ಅಧಿಕಾರಿಗಳು ಇದ್ದರು.
ಫೋಟೋ ಶೀರ್ಷಿಕೆಗಳು...
ಎಸ್ ಎಂಡಿವೈ-ಎಸ್ -04-4
ಮಂಡ್ಯ ತಾಲೂಕಿನ ಬೇವುಕಲ್ಲುಗ್ರಾಮದ ಬೀರೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುವ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಕುಮಾರ ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದರು.

