ಬೆಳಗಾವಿಯಲ್ಲಿ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪಂಗಡ ಉಪಯೋಜನೆಯಡಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2024ರಲ್ಲಿ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪದಕ ಗೆದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಜನವರಿ 31ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ಸಂಪರ್ಕಿಸಬಹುದು.
ಬೆಳಗಾವಿ: 2025-26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪಂಗಡ ಉಪಯೋಜನೆಯಡಿ 2024ರ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾ ಕೂಟದಲ್ಲಿಪದಕ ವಿಜೇತ ಪ.ಜಾತಿ, ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಕ್ರೀಡಾಪಟುಗಳು ಜ.31ರ ಒಳಗಾಗಿ ವೆಬ್ ಸೈಟ್ hಠಿಠಿp://sಛಿvasಜ್ಞಿdh್ಠ.ka್ಟ್ಞaಠಿaka.ಜಟv.ಜ್ಞಿ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರ ಕಚೇರಿ ಅಥವಾ ಕಚೇರಿಯ ದೂ. 0831-2474101 ಸಂಪರ್ಕಿಸಬಹುದು.