ಕರ್ನಾಟಕ ಕ್ರೀಡಾಕೂಟ ತುಮಕೂರಿನ ಹೊಸ ಇತಿಹಾಸ

Contributed byvktmkphotos@gmail.com|Vijaya Karnataka

ತುಮಕೂರಿನಲ್ಲಿ ಜನವರಿ 16 ರಿಂದ 22 ರವರೆಗೆ ಕರ್ನಾಟಕ ಕ್ರೀಡಾಕೂಟ ನಡೆಯಲಿದೆ. ಇದು ಜಿಲ್ಲೆಗೆ ಐತಿಹಾಸಿಕ ಕ್ಷಣವಾಗಲಿದೆ. ಒಳಾಂಗಣ ಕ್ರೀಡಾಂಗಣದ ನಾಮಫಲಕ ಅನಾವರಣ ಮತ್ತು ನವೀಕೃತ ಕ್ರೀಡಾಂಗಣದ ಶಿಲಾನ್ಯಾಸ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ರಾಜ್ಯಪಾಲರು ಸಮಾರೋಪ ಭಾಷಣ ಮಾಡಲಿದ್ದಾರೆ. ಈ ಕೂಟದಿಂದ ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಸಿಗಲಿದೆ.

karnataka sports meet in tumkur historical preparations and sports festival

ಕ್ರೀಡಾಕೂಟ ಪೂರ್ವೋತ್ಸವ, ಒಳಾಂಗಣ ಕ್ರೀಡಾಂಗಣದ ನಾಮಫಲಕ ಅನಾವರಣ, ನವೀಕೃತ ಕ್ರೀಡಾಂಗಣದ ಶಿಲಾನ್ಯಾಸ

ವಿಕ ಸುದ್ದಿಲೋಕ ತುಮಕೂರು

ನಗರದಲ್ಲಿಜನವರಿ 16ರಿಂದ 22ರವರೆಗೆ ನಡೆಯಲಿರುವ ಕರ್ನಾಟಕ ಕ್ರೀಡಾಕೂಟ ತುಮಕೂರಿನ ಐತಿಹಾಸಿಕ ಕಾರ್ಯಕ್ರಮ ಎಂದು ಗೃಹ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ನಗರದ ಡಾ.ಜಿ.ಪರಮೇಶ್ವರ್ ಒಳಾಂಗಣ ಕ್ರೀಡಾಂಗಣ ಸಂಕೀರ್ಣದಲ್ಲಿಮಂಗಳವಾರ ಕರ್ನಾಟಕ ಕ್ರೀಡಾಕೂಟದ ಪೂರ್ವೋತ್ಸವ ಹಾಗೂ ಒಳಾಂಗಣ ಕ್ರೀಡಾಂಗಣದ ನಾಮಫಲಕ ಅನಾವರಣ ಮತ್ತು ನವೀಕೃತ ಕ್ರೀಡಾಂಗಣದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ತುಮಕೂರಿನಲ್ಲಿರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜಿಸಿರುವುದು ತುಮಕೂರು ಜಿಲ್ಲೆಗೆ ಐತಿಹಾಸಿಕ ಕ್ಷಣವಾಗಿದೆ. ಈ ಹಿಂದೆ ತುಮಕೂರಿನಲ್ಲಿರಾಜ್ಯ ಮಟ್ಟದ ಕ್ರೀಡಾಕೂಟ ನಡೆದಿಲ್ಲ, ತುಮಕೂರಿನಲ್ಲಿಕ್ರೀಡಾಕೂಟ ಆಯೋಜಿಸಲು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಅಧ್ಯಕ್ಷರನ್ನು ಒಪ್ಪಿಸಿ ಈ ಅವಕಾಶ ಪಡೆದಿದ್ದು, ರಾಜ್ಯದ ಯಾವುದೇ ಜಿಲ್ಲೆಯಲ್ಲಿಆಗದಂತಹ ಅದ್ದೂರಿ ಕ್ರೀಡಾಕೂಟ ಇದಾಗಲಿದೆ. ಈ ಮೂಲಕ ತುಮಕೂರು ಮತ್ತೊಂದು ಇತಿಹಾಸ ಬರೆಯಲಿದೆ ಎಂದರು.

ಕರ್ನಾಟಕ ಕ್ರೀಡಾಕೂಟದಲ್ಲಿರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದು, ಜನವರಿ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಜನವರಿ 22ರಂದು ರಾಜ್ಯಪಾಲರು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟಿ. ಅನಂತರಾಜ್ , ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ , ಎಸ್ ಪಿ ಕೆ.ವಿ. ಅಶೋಕ್ , ಎಡಿಸಿ ಡಾ.ಎನ್ . ತಿಪ್ಪೇಸ್ವಾಮಿ ಮತ್ತಿತರರಿದ್ದರು.

ಕೋಟ್ :

ತುಮಕೂರಿನಲ್ಲಿಕರ್ನಾಟಕ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಿರುವುದರಿಂದ ಜಿಲ್ಲೆಯ ಕ್ರೀಡಾ ಉತ್ಸಾಹಿಗಳು ಹಾಗೂ ಗ್ರಾಮೀಣ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ. ಮುಂದಿನ ದಿನಗಳಲ್ಲಿಕ್ರೀಡೆಗೆ ಇನ್ನಷ್ಟು ಪ್ರೋತ್ಸಾಹ ನೀಡಲು ಹಾಗೂ ಕ್ರೀಡಾಪಟುಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

- ಡಾ.ಕೆ.ಗೋವಿಂದರಾಜ್ , ಅಧ್ಯಕ್ಷ, ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ

ಕೋಟ್ :

ತುಮಕೂರಿನಲ್ಲಿಎಲ್ಲರೀತಿಯ ಕ್ರೀಡೆಗಳನ್ನು ನಡೆಸಲು ಅಗತ್ಯವಾದ ಸೌಲಭ್ಯಗಳಿರುವುದರಿಂದ ಇಲ್ಲಿಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಟದಿಂದ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಗುರುತಿಸಿಕೊಳ್ಳಲು ಉತ್ತಮ ಅವಕಾಶ ಸಿಗಲಿದೆ.

- ಚೇತನ್ ಆರ್ ., ಆಯುಕ್ತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ

ಫೋಟೋ 13ಟಿಯುಎಂ8 : ಡಾ.ಜಿ.ಪರಮೇಶ್ವರ್ ಒಳಾಂಗಣ ಕ್ರೀಡಾಂಗಣ ಸಂಕೀರ್ಣದಲ್ಲಿನವೀಕೃತ ಒಳಾಂಗಣ ಕ್ರೀಡಾಂಗಣದ ಶಿಲಾನ್ಯಾಸವನ್ನು ಡಾ.ಜಿ.ಪರಮೇಶ್ವರ್ , ಡಾ.ಕೆ.ಗೋವಿಂದರಾಜ್ ನೆರವೇರಿಸಿದರು.