ಮಾರಳ್ಳಿ ಕ್ಲಸ್ಟರ್ ವ್ಯಾಪ್ತಿಯ ಕಲಿಕಾ ಹಬ್ಬ

Contributed byabhilash.gowda7707@gmail.com|Vijaya Karnataka

ಮಾರಳ್ಳಿ ಕ್ಲಸ್ಟರ್‌ನ ಕಲಿಕಾ ಹಬ್ಬವು ಮಿಣ್ಯ ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪೋಷಕರು ಮಕ್ಕಳ ಕಲಿಕೆಗೆ ಹೆಚ್ಚಿನ ಸಹಕಾರ ನೀಡಬೇಕೆಂದು ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ್ ತಿಳಿಸಿದರು. ಕೋವಿಡ್‌ನಿಂದಾದ ಕಲಿಕಾ ಹಿನ್ನಡೆಯನ್ನು ಸರಿಪಡಿಸಲು ಈ ಹಬ್ಬ ಆಯೋಜಿಸಲಾಗಿದೆ. ಹಿಂದುಳಿದ ಮಕ್ಕಳನ್ನು ಗುರುತಿಸಿ ಉತ್ತೇಜನ ನೀಡುವ ಉದ್ದೇಶ ಇದರಲ್ಲಿದೆ. ಹಲವು ಗಣ್ಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

maralli cluster educational festival a celebration of quality learning

ವಿಕ ಸುದ್ದಿಲೋಕ ಹನೂರು

ಕಲಿಕಾ ಹಬ್ಬಗಳಲ್ಲಿಪೋಷಕರು ಹೆಚ್ಚಿನ ಸಂಖ್ಯೆಯಲ್ಲಿಭಾಗವಹಿಸುವ ಮೂಲಕ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ನೆರವಾಗಬೇಕು ಎಂದು ಮಾರಳ್ಳಿ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ್ ತಿಳಿಸಿದರು.

ತಾಲೂಕಿನ ಮಿಣ್ಯ ಶಾಲೆಯಲ್ಲಿಹಮ್ಮಿಕೊಂಡಿದ್ದ ಮಾರಳ್ಳಿ ಕ್ಲಸ್ಟರ್ ವ್ಯಾಪ್ತಿಯ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘‘ಸರಕಾರಿ ಶಾಲೆಗಳಲ್ಲಿಮಕ್ಕಳ ಕಲಿಕಾ ಮಟ್ಟ ತುಂಬಾ ಉತ್ತಮವಾಗಿದೆ. ಪೋಷಕರು ಸಹ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಲಕಾಲಕ್ಕೆ ಪರಿಶೀಲನೆ ನಡೆಸಿ ಮಕ್ಕಳ ಕಲಿಕಾ ಪ್ರಗತಿಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡುವಲ್ಲಿಸಹಕಾರ ನೀಡಬೇಕು. ಬಹಳ ಮುಖ್ಯವಾಗಿ ಕಾಡಂಚಿನ ಗ್ರಾಮಗಳಲ್ಲೂಉತ್ತಮ ರೀತಿಯ ಪಾಠ ಪ್ರವಚನಗಳು ನಡೆಯುತ್ತಿವೆ,’’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜ ಮಾತನಾಡಿ,‘‘ ಮಕ್ಕಳ ಕಲಿಕೆ ಈ ಹಿಂದಿನ ದಿನಗಳಲ್ಲಿಕೋವಿಡ್ ನಂತಹ ದಿನಮಾನಗಳಲ್ಲಿಕಲಿಕಾ ಮಟ್ಟ ಅಥವಾ ಮಕ್ಕಳ ಕಲಿಕೆಗೆ ಕೋವಿಡ್ ಹಿನ್ನಡೆ ಉಂಟು ಮಾಡಿತ್ತು. ಅದರ ಪರಿಣಾಮ ಕಲಿಕಾ ಹಬ್ಬ ಎಂಬ ನಾಮಕರಣ ಮಾಡಿ ಎಲ್ಲೆಡೆ ಹಮ್ಮಿಕೊಳ್ಳಲಾಗಿದೆ,’’ ಎಂದು ಹೇಳಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೆಗೌಡ ಮಾತನಾಡಿ,‘‘ ಕಾಡಂಚಿನ ಗ್ರಾಮಗಳ ಕಲಿಕಾ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ಕಲಿಕೆಯಲ್ಲಿಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ,’’ ಎಂದರು.

ಮಿಣ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಾ, ಶಿಕ್ಷಣ ಸಂಯೋಜಕರು, ಬಸಪ್ಪನ ದೊಡ್ಡಿ ಶಾಲೆಯ ಮುಖ್ಯ ಶಿಕ್ಷಕ ವೀರಪ್ಪ, ಮಿಣ್ಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಾಗರಾಜು, ಸಾಹೇಬರ ದೊಡ್ಡಿ ಶಾಲೆಯ ಮುಖ್ಯ ಶಿಕ್ಷಕ ಲಚ್ಚುಮುನಾಯಕ, ದಿನ್ನಳ್ಳಿ ಶಾಲೆಯ ಮುಖ್ಯ ಶಿಕ್ಷಕ ಕೃಷ್ಣ ಸೇರಿದಂತೆ ಇನ್ನೂ ಹಲವಾರು ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.

10ಎಚ್ ಎನ್ ಆರ್ 07

ಮಿಣ್ಯ ಶಾಲೆಯಲ್ಲಿಮಾರಳ್ಳಿ ಕ್ಲಸ್ಟರ್ ವ್ಯಾಪ್ತಿಯ ಕಲಿಕಾ ಹಬ್ಬ ಕಾರ್ಯಕ್ರಮ ನಡೆಯಿತು.