((ಚೂರು-ಪಾರು))
ವಸ್ತು ಪ್ರದರ್ಶನ ಉದ್ಘಾಟನಾ ಸಮಾರಂಭ
ಸಿರುಗುಪ್ಪ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸಂಯುಕ್ತಾಶ್ರಯದಲ್ಲಿಎಸ್ಸಿ ಮತ್ತು ಎಸ್ಟಿ ಸಮುದಾಯದ ಯೋಜನೆಗಳ ಕುರಿತು ಜ.16 ರಿಂದ 18 ರವರೆಗೆ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಜ.16 ರಂದು ಬೆಳಗ್ಗೆ 10.30 ಗಂಟೆಗೆ ಶಾಸಕ ಬಿ.ಎಂ.ನಾಗರಾಜ ಉದ್ಘಾಟಿಸುವರು. ಕೆಕೆಆರ್ ಟಿಸಿ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ ವಾನ್ ಅಧ್ಯಕ್ಷತೆ ವಹಿಸುವರು. ಸಿರುಗುಪ್ಪ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಮಾರುತಿ ವರಪ್ರಸಾದ ರೆಡ್ಡಿ, ತಹಸೀಲ್ದಾರ್ ಗೌಸಿಯಾ ಬೇಗಂ ಸೇರಿ ಇತರರು ಪಾಲ್ಗೊಳ್ಳುವರು. ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ.ತಿಳಿಸಿದ್ದಾರೆ.
---
ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಬಳ್ಳಾರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಮಟ್ಟದ ಕ್ರೀಡಾ ಶಾಲೆ ಮತ್ತು ವಸತಿ ನಿಲಯಕ್ಕೆ 2026-27 ನೇ ಸಾಲಿನ ಪ್ರತಿಭಾವಂತ ಕ್ರೀಡಾಪಟುಗಳ ಪ್ರಥಮ ಹಂತದ ಹಿರಿಯ ಮತ್ತು ಕಿರಿಯ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಜ.17 ರಂದು ಜಿಲ್ಲಾ ಕ್ರೀಡಾಂಗಣ, ಜ.20 ರಂದು ಕುರುಗೋಡು, ಜ.21 ರಂದು ಕಂಪ್ಲಿ, ಜ.22 ರಂದು ಸಿರುಗುಪ್ಪ, ಜ.23 ರಂದು ಸಂಡೂರು ಮತ್ತು ಜ.24 ರಂದು ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿಬೆಳಗ್ಗೆ 11 ಗಂಟೆಯಿಂದ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.
ಪ್ರಥಮ ಹಂತದ ಆಯ್ಕೆಯಾದ ಕ್ರೀಡಾಪಟುಗಳು ಜ.30 ಮತ್ತು 31 ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿಭಾಗವಹಿಸಬಹುದಾಗಿದೆ. ಮಾಹಿತಿಗೆ ನಗರದ ನಲ್ಲಚೇರುವು ಪ್ರದೇಶದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ತರಬೇತುದಾರರಾದ ಎಂ.ಜಾಕೀರ್ (ಮೊ.9449002715), ಮಹ್ಮದ್ ಮಸೂದ್ (ಮೊ. 9886688858) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
---

