ಸರಕಾರಕ್ಕೆ ಸಾವಿರ ದಿನದ ಸಂಭ್ರಮ ಆಚರಣೆ ಸಿಧಿದ್ಧಧಿತೆ: ಡಿಧಿಕೆಧಿಶಿ

Contributed byKeerthi Prasad|Vijaya Karnataka

ರಾಜ್ಯದ ಕಾಂಗ್ರೆಸ್‌ ಸರಕಾರ ಫೆಬ್ರವರಿ 13ಕ್ಕೆ ಸಾವಿರ ದಿನ ಪೂರೈಸಲಿದೆ. ಈ ಹಿನ್ನೆಲೆಯಲ್ಲಿಬೃಹತ್‌ ಕಾರ್ಯಕ್ರಮದ ಮೂಲಕ ಸಂಭ್ರಮ ಆಚರಿಸಲು ಸಿದ್ಧತೆ ನಡೆದಿದೆ. ಕಂದಾಯ ಇಲಾಖೆ ವತಿಯಿಂದ ಕಾರ್ಯಕ್ರಮಗಳು ಆಯೋಜನೆಯಾಗಲಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರ ಸಮಯದಂತೆ ಬೆಂಗಳೂರಿನಲ್ಲಿಕಾರ್ಯಕ್ರಮ ನಡೆಯಲಿದೆ. 100 ಕಾಂಗ್ರೆಸ್‌ ಕಚೇರಿ ಕಟ್ಟಡಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಯಲಿದೆ.

congresss 1000 days celebration with minister dk shivakumars vision
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1000 ದಿನಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಫೆಬ್ರವರಿ 13 ರಂದು ಬೃಹತ್ ಕಾರ್ಯಕ್ರಮದ ಮೂಲಕ ಸಂಭ್ರಮಾಚರಣೆ ನಡೆಸಲು ಸಿದ್ಧತೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮನರೇಗಾ ಬಚಾವೋ ಹೋರಾಟದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ವತಿಯಿಂದ ಈ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ ಎಂದರು.

ಈ ಸಂಭ್ರಮಾಚರಣೆಯ ಅಂಗವಾಗಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಸಮಯ ನೀಡಿದ ಬಳಿಕ ಬೆಂಗಳೂರಿನಲ್ಲಿ ದೊಡ್ಡ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ 100 ಕಾಂಗ್ರೆಸ್ ಕಚೇರಿ ಕಟ್ಟಡಗಳ ನಿರ್ಮಾಣಕ್ಕೆ ವರ್ಚುಯಲ್ ಮೂಲಕ ಏಕಕಾಲಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಇದಕ್ಕಾಗಿ ಕಟ್ಟಡ ನಕ್ಷೆಗಳಿಗೆ ಅನುಮೋದನೆ ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಬ್ಲಾಕ್ ಮತ್ತು ಡಿಸಿಸಿ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ.
ಪಕ್ಷದ ಆಸ್ತಿಗಳ ಬಗ್ಗೆ ಮಾತನಾಡಿದ ಡಿಸಿಎಂ, ಹಿಂದೆ ಪಕ್ಷಕ್ಕೆ 19 ನಿವೇಶನಗಳು ಮತ್ತು 45 ಸ್ವಂತ ಕಟ್ಟಡಗಳಿದ್ದವು. ತಾನು ಅಧ್ಯಕ್ಷರಾದ ನಂತರ 64 ನಿವೇಶನಗಳ ನೋಂದಣಿಯಾಗಿದೆ. ಇನ್ನೂ 58 ಆಸ್ತಿಗಳ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 122 ಆಸ್ತಿಗಳು ಪಕ್ಷದ ಹೆಸರಿಗೆ ಬಂದಿವೆ. ಇನ್ನೂ 186 ಆಸ್ತಿಗಳನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಬೇಕಿದೆ. ಕೋನರೆಡ್ಡಿ, ಶರಣಪ್ರಕಾಶ್ ಪಾಟೀಲ್, ಸುಧಾಕರ್, ಉದಯ್, ಸಿರಗುಪ್ಪ ನಾಗರಾಜ್ ಸೇರಿದಂತೆ 22 ಮಂದಿ ತಮ್ಮ ಆಸ್ತಿಗಳನ್ನು ಪಕ್ಷಕ್ಕೆ ನೀಡಿದ್ದಾರೆ ಎಂದು ಸಭೆಯಲ್ಲಿ ವಿವರಿಸಿದರು.