ತಂಬಾಕು ಸೇವನೆಯಿಂದ ದೂರವಿರಿ
ವಿಕ ಸುದ್ದಿಲೋಕ ಕೊಪ್ಪಳ
‘‘ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು, ಉತ್ತಮ ಬದುಕು ಕಟ್ಟಿಕೊಳ್ಳಬೇಕು,’’ಎಂದು ಜಿಲ್ಲಾಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ ಹೇಳಿದರು.
ತಾಲೂಕಿನ ಲಿಂಗದಹಳ್ಳಿ ಎ.ಪಿ.ಜೆ ಅಬ್ದುಲ್ ಕಲಾಂ ರೆಸಿಡೆನ್ಸಿ ಸ್ಕೂಲ್ ನಲ್ಲಿಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸರ್ವೇಕ್ಷಣಾ ಘಟಕ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶ ಸಂಯುಕ್ತಾಶ್ರಯದಲ್ಲಿಹಮ್ಮಿಕೊಂಡಿದ್ದ ರಾಷ್ಟ್ರೀಯ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮದಲ್ಲಿಮಾತನಾಡಿದರು.
‘‘ ಸಾರ್ವಜನಿಕ ಸ್ಥಳಗಳಲ್ಲಿಧೂಮಪಾನ ಮಾಡುವುದು ನಿಷೇಧ. ಶಿಕ್ಷಣ ಸಂಸ್ಥೆಗಳ ಸುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರುವುದನ್ನು ನಿಷೇಧಿಸಲಾಗಿದೆ,’’ ಎಂದು ತಿಳಿಸಿದರು.
ಎನ್ ಟಿಸಿಪಿ ಸಮಾಜ ಕಾರ್ಯಕರ್ತೆ ಸರಸ್ವತಿ ಮಾತನಾಡಿ, ‘‘ಪ್ರತಿ ವರ್ಷ ಮೇ 31ರಂದು ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಕುರಿತು ಯುವಕರಿಗೆ ಅರಿವು ಮೂಡಿಸಲಾಗುತ್ತಿದೆ. ತಂಬಾಕು ಸೇವನೆಯಿಂದ ಕ್ಯಾನ್ಸರ್ , ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ, ಲಕ್ವಾ ಇತರೆ ಕಾಯಿಲೆಗಳು ಬರಬಹುದು,’’ ಎಂದರು.
ಜಿಲ್ಲಾಸಲಹೆಗಾರ ಸಂಗಮೇಶ ಮಮಟಗೇರಿ ಮಾತನಾಡಿದರು. ಮುಖ್ಯ ಶಿಕ್ಷಕ ದ್ಯಾಮಣ್ಣ ಗಡ್ಡಿ, ಶಿಕ್ಷಕರಾದ ಪ್ರಮೋದ ಕೆ., ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
13-ಕೆಪಿಎಲ್ ವಿಠ್ಠಲ ಫೊಟೊ-23
ಕೊಪ್ಪಳ ತಾಲೂಕಿನ ಲಿಂಗದಹಳ್ಳಿ ಎ.ಪಿ.ಜೆ ಅಬ್ದುಲ್ ಕಲಾಂ ರೆಸಿಡೆನ್ಸಿ ಸ್ಕೂಲ್ ನಲ್ಲಿಹಮ್ಮಿಕೊಂಡಿದ್ದ ರಾಷ್ಟ್ರೀಯ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮದಲ್ಲಿವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

