ವಿಕ ಸುದ್ದಿಲೋಕ ಧಾರವಾಡ
ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ನಗರದ ಕೇಂದ್ರ ಕಾರಾಗೃಹದಲ್ಲಿಮಂಗಳವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಜಿಲ್ಲೆಯ ಲಕ್ಮೇಶ್ವರ ತಾಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಮಾಲಿಂಗಪ್ಪ ಪೂಜಾರ (46) ಆತ್ಮಹತ್ಯೆ ಮಾಡಿಕೊಂಡವರು. ಪತ್ನಿಯನ್ನು ಕೊಲೆ ಮಾಡಿದ ಆರೋಪದಡಿ ಜೀವಾವಧಿ ಶಿಕ್ಷೆ ಆಗಿತ್ತು.
ತಾವು ಕೆಲಸ ಮಾಡುತ್ತಿದ್ದ ಕೈಮಗ್ಗ ಕೊಠಡಿಯಲ್ಲಿನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ. ಪೊಲೀಸರು ಪರಿಶೀಲನೆ ನಡೆಸಿದ್ದು, ಉಪನಗರ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

