ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಿ

Contributed bymanjunathrd59@gmail.com|Vijaya Karnataka

ಹಾವೇರಿ ಜಿಲ್ಲಾಡಳಿತದಿಂದ ಜನವರಿ ೨೬ ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆಗಳು ನಡೆಯುತ್ತಿವೆ. ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಅಧಿಕಾರಿಗಳಿಗೆ ಸ್ವಚ್ಛತೆ, ವೇದಿಕೆ ಅಲಂಕಾರ, ಕುಡಿಯುವ ನೀರು, ದೀಪಾಲಂಕಾರ, ಆಸನ ವ್ಯವಸ್ಥೆ, ಆಮಂತ್ರಣ ಪತ್ರಿಕೆ ಮುದ್ರಣ, ಹಾಗೂ ಸಾಧಕರ ಸನ್ಮಾನಕ್ಕೆ ಸೂಚನೆ ನೀಡಿದ್ದಾರೆ. ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿವೆ.

republic day celebrating indian tradition and sports achievements in haveri

13 ಮಂಜು 2

ಪೂರ್ವಭಾವಿ ಸಭೆಯಲ್ಲಿಜಿಲ್ಲಾಧಿಕಾರಿ ಸೂಚನೆ (ಪಾಯಿಂಟ್ )

ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಿ (ಹೆಡ್ )

ವಿಕ ಸುದ್ದಿಲೋಕ ಹಾವೇರಿ

ಜಿಲ್ಲಾಡಳಿತದಿಂದ ಇದೇ ಜ.26 ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮ, ಅರ್ಥಪೂರ್ಣ ಹಾಗೂ ಶಿಸ್ತುಬದ್ಧವಾಗಿ ಆಚರಿಸುವ ನಿಟ್ಟಿನಲ್ಲಿಅಗತ್ಯ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘‘ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆಯ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆ, ವೇದಿಕೆ ಅಲಂಕಾರ, ಕುಡಿಯುವ ನೀರು ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ತೋಟಗಾರಿಕೆ ಇಲಾಖೆ, ನಗರಸಭೆ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಜವಾಬ್ದಾರಿ ಹಾಗೂ ಸಮನ್ವಯದಿಂದ ಕೈಗೊಳ್ಳಬೇಕು’’ ಎಂದು ತಿಳಿಸಿದರು.

‘‘ಸರಕಾರಿ ಕಚೇರಿಗಳು, ನಗರದ ವೃತ್ತಗಳಿಗೆ ದೀಪಾಲಂಕಾರ, ಸನ್ಮಾನಿತರಿಗೆ, ಮಾಧ್ಯಮದ, ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ, ಶಿಷ್ಟಾಚಾರ ಅನುಸಾರ ಆಮಂತ್ರಣ ಪತ್ರಿಕೆ, ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ, ನಾಗರಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಮಾಡಬೇಕು’’ ಎಂದರು.

ಕ್ರೀಡೆ ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲು ಸಭೆಯಲ್ಲಿತೀರ್ಮಾನಿಸಲಾಯಿತು. ಜಿಪಂ ಸಿಇಒ ರುಚಿ ಬಿಂದಲ…, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ, ಸವಣೂರು ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ಹಾವೇರಿ ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ಡಿಡಿಪಿಯು ಅಶೋಕ ಶಾಸ್ತ್ರೀ, ಡಿಡಿಪಿಐ ಮೋಹನ ದಂಡಿನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ, ನಗರಸಭೆ ಆಯುಕ್ತ ಕಾಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್ .ಪಾಟೀಲ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಟೋ 13 ಮಂಜು 2

ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ ಅಧ್ಯಕ್ಷತೆಯಲ್ಲಿಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ನಡæಯಿತು.